Friday, September 30, 2022

Latest Posts

ಮಾಲ್ದಾರೆಯಲ್ಲಿ ಹಾಡಹಗಲೇ ಹುಲಿ ದಾಳಿಗೆ ಹಸು ಬಲಿ

ಹೊಸ ದಿಗಂತ ವರದಿ, ಮಡಿಕೇರಿ:

ಹಾಡಹಗಲೇ ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ಸಿದ್ದಾಪುರ ಸಮೀಪದ ಮಾಲ್ದಾರೆಯಲ್ಲಿ ನಡೆದಿದೆ.
ಮಾಲ್ದಾರೆ ಗ್ರಾಮ ಪಂಚಾಯಿತಿಯ ಮಾರ್ಗೊಲ್ಲಿ- ಹುಂಡಿ ಮುಖ್ಯ ರಸ್ತೆಯಲ್ಲಿ ಹಾಡಹಗಲೇ ಹುಲಿ ಹಸುವನ್ನು ಕೊಂದು ಹಾಕಿದೆ. ಇದನ್ನು ಕಂಡು ಸ್ಥಳೀಯರು ಭಯಭೀತರಾಗಿದ್ದಾರೆ.
ವಿಷಯ ತಿಳಿದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಹುಲಿಯನ್ನು ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಹುಲಿಯನ್ನು ಹಿಡಿಯದಿದ್ದರೆ ಅರಣ್ಯ ಭವನಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆಯನ್ನೂ ನೀಡಲಾಗಿದ.
ಸ್ಥಳಕ್ಕೆ ಅರಣ್ಯ ಸ್ಥಳಕ್ಕೆ ಶಾಸಕ ಕೆ.ಜಿ. ಬೋಪಯ್ಯ ಅವರು ಭೇಟಿ ನೀಡಿ ಗ್ರಾಮಸ್ಥರ ಅಹವಾಲು ಆಲಿಸಿದರಲ್ಲದೆ, ಹುಲಿಯನ್ನು ಸೆರೆ ಹಿಡಿಯಲು ಕ್ರಮವಹಿಸುವಂತೆ ಅರಣ್ಯ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!