ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಹುಲ್ ಗಾಂಧಿ ಮತ್ತು ರಾಜ್ಯದ ಕಾಂಗ್ರೆಸ್ ನಾಯಕರು ಕೇವಲ ಸಂವಿಧಾನದ ಪ್ರತಿಯನ್ನು ಕೈಯಲ್ಲಿ ಹಿಡಿದು ಓಡಾಡಿದರೆ ಸಾಲದು, ಡಾ ಬಿಆರ್ ಅಂಬೇಡ್ಕರ್ ರಚಿಸಿರುವ ಸಂವಿಧಾನದ ಅಂಶಗಳನ್ನು ಕೇಳಿ ತಿಳಿದುಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಟೀಕಿಸಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಲೋಕಸಭಾ ಚುನಾವಣೆ ಸಮಯದಲ್ಲಿ ಅಪಪ್ರಚಾರ ಮಾಡಿದ್ದರು, ಆದರೆ ಈಗ ಅವರೇ ಸಂವಿಧಾನದಲ್ಲಿ ಬದಲಾವಣೆ ತರುವ ಮಾತಾಡುತ್ತಿದ್ದಾರೆ ಎಂದು ನಿಖಿಲ್ ಟಾಂಗ್ ಕೊಟ್ಟಿದ್ದಾರೆ.