ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಇಂದು ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಂಧಿಸಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್, ಹೆಬ್ಬಾಳ ಠಾಣಾ ವ್ಯಾಪ್ತಿಯಲ್ಲಿ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ಮಾಡಿ ಟೆರರಿಸ್ಟ್ ಜೊತೆ ಲಿಂಕ್ ಇದೆಯಾ ಎಂದು ನೋಡುತ್ತಿದ್ದಾರೆ. ಹಾಗಾಗಿ ಬಂಧಿತರನ್ನು ಈಗಲೇ ಟೆರರಿಸ್ಟ್ ಎಂದು ಹೇಳುವುದಕ್ಕೆ ಆಗಲ್ಲ ಎಂದು ಹೇಳಿದರು.
ಕೆಲವು ಕೃತ್ಯವೆಸಗುವ ಬಗ್ಗೆ ಮಾಹಿತಿ ಸಿಕ್ಕಿದೆ. ಆಮೇಲೆ ಈ ಬಗ್ಗೆ ಸತ್ಯಾನುಸತ್ಯತೆ ಹೊರ ಬೀಳಲಿದೆ. ಪೊಲೀಸರ ತನಿಖೆ ಆಗಲಿ ಆಮೇಲೆ NIA ತನಿಖೆ ಬಗ್ಗೆ ನೋಡೋಣ ಎಂದು ಡಾ ಜಿ.ಪರಮೇಶ್ವರ್ ಹೇಳಿದರು. ಅವರು ಯಾವ ಸಂಘಟನೆ ಜತೆ ಗುರುತಿಸಿಕೊಂಡಿದ್ದರು ಎಂಬ ಬಗ್ಗೆ ತನಿಖೆಯಿಂದ ತಿಳಿಯಬೇಕಿದೆ ಎಂದರು.
ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಂಧಿಸಿ ಬೆಂಗಳೂರಿನ ಎನ್ ಐ ಎ ಕೋರ್ಟ್ ಗೆ ಹಾಜರುಪಡಿಸಿದೆ.ವಿಚಾರಣೆ ನಡೆಸಿದ ಎನ್ ಐ ಎ ವಿಶೇಷ ಕೋರ್ಟ್ ಐವರು ಶಂಕಿತ ಉಗ್ರರನ್ನು ಏಳು ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.