ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಘಟಕದಿಂದ ಸನ್ಮಾನಿಸಲಾಯಿತು.
ಕೆಪಿಸಿಸಿ ಕಚೇರಿಯ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಒಂದು ವರ್ಷದಲ್ಲಿ ಸರ್ಕಾರ ಪೂರೈಸಿದ್ದು ಮುಖ್ಯವಲ್ಲ, ಪಕ್ಷವು ನನ್ನ ನೇತೃತ್ವದಲ್ಲಿ ನಾಲ್ಕು ವರ್ಷದಲ್ಲಿ ಸರ್ಕಾರ ರಚಿಸಿದೆ ಇದು ಮುಖ್ಯವಾಗಿದೆ ಎಂದು ಹೇಳಿದರು.
ಬಿಬಿಎಂಪಿ ಚುನಾವಣೆ ಬಗ್ಗೆ ಈಗ ಮಾತನಾಡುವ ಅಗತ್ಯವಿಲ್ಲ. ರಾಜೀವ್ ಗಾಂಧಿ ಜಾರಿಗೆ ತಂದ ಸುಧಾರಣೆಗಳಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇನ್ನೂ ಕಾಲಾವಕಾಶವಿದೆ. ಇದೆಲ್ಲದಕ್ಕೂ ನಾವು ಸಿದ್ಧರಾಗಿರಬೇಕು. ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದರೂ ಸೋತರೂ ಪರವಾಗಿಲ್ಲ. ನಿರ್ವಾಹಕರು ಎಲ್ಲಾ ಸೆಲ್ಗಳಲ್ಲಿ ಸಕ್ರಿಯರಾಗಿರಬೇಕು. ಇಲ್ಲ ಅಂದ್ರೆ ವಿಸರ್ಜಿಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.