ಹೊಸ ದಿಗಂತ ವರದಿ, ವಿಜಯಪುರ:
ಕಾಂಗ್ರೆಸ್ ಸರ್ಕಾರ ರಾಜಕೀಯವಾಗಿ ಎದುರಿಸಲಾಗದೆ ನಮ್ಮ ಎಥನಾಲ್ ಕಾರ್ಖಾನೆಗೆ ನೋಟಿಸ್ ನೀಡಿದೆ. ಇಂಥ ನೋಟಿಸ್ ಗಳಿಗೆ ಹೆದರುವ ಜಾಯಮಾನ ನನ್ನದಲ್ಲ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗುಡುಗಿದ್ದಾರೆ.
ಶಾಸಕ ಬಸನಗೌಡ ಪಾಟೀಲ ಯತ್ನಾಳ ಈ ಬಗ್ಗೆ ಟ್ವಿಟ್ ನಲ್ಲಿ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದ್ದು, ಹಿಂದುಳಿದ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿ ಮಾಡಲು ಕಾರ್ಖಾನೆ ಸ್ಥಾಪಿಸಲಾಗಿದೆ. ಕೈಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ ಎಂಬುವುದು ಗೊತ್ತಿರುವ ವಿಷಯ. ನೂರಾರು ಜನರಿಗೆ ಉದ್ಯೋಗ ಸೃಷ್ಟಿಸಿದ್ದೇನೆ ಎಂದು ತಿಳಿಸಿದ್ದಾರೆ.
ಜಿಲ್ಲೆಯ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ನನ್ನ ಅಳಿಲು ಸೇವೆ ಇದಾಗಿದೆ. ರಾಜಕೀಯ ಒತ್ತಡಕ್ಕೆ ಮಣಿದು ನನ್ನ ಕಾರ್ಖಾನೆ ಮುಚ್ಚಿಸುವುದರಿಂದ ಏನು ಸಾಧಿಸಲು ಆಗಲ್ಲ. ಕಾರ್ಖಾನೆ ಮತ್ತೆ ತೆರೆಯುವುದು ನಿಶ್ಚಿತ ಎಂದು ತಿಳಿಸಿದ್ದಾರೆ.
ಈ ವಿಷಯದಲ್ಲಿ ಸುಮ್ಮನೆ ಕೂರದೇ ಕಾನೂನು ಹೋರಾಟ ನಡೆಸುವದಾಗಿ ಯತ್ನಾಳ ಎಕ್ಸ್ ನಲ್ಲಿ ಟ್ವಿಟ್ ಮಾಡಿದ್ದಾರೆ.