ಹೊಸದಿಗಂತ ಡಿಜಿಟಲ್ ಡೆಸ್ಕ್ :
ದೇಶದಲ್ಲಿ ಇಂದು ಪ್ರಧಾನಿ ಮೋದಿ ಪದವಿ ಹಾಗೂ ಪ್ರಮಾಣ ಪತ್ರದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಲೇ ಇದ್ದು, ಈ ಸಂಬಂಧ ಕೋರ್ಟ್ ಮೊರೆ ಹೋಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ನ್ಯಾಯಾಲಯ 25 ಸಾವಿರ ರೂ. ದಂಡ ಹಾಕಿತ್ತು.
ಇದೀಗ ಈ ನಡುವೆ ಎನ್‌ಸಿಪಿ ನಾಯಕ ಪ್ರಧಾನಿ ಮೋದಿ ಪರ ಬ್ಯಾಟ್ ಬೀಸಿದ್ದಾರೆ.
ಸಚಿವರ ಪದವಿಯನ್ನು ಪ್ರಶ್ನಿಸುವುದು ಸರಿಯಲ್ಲ, ಒಬ್ಬ ನಾಯಕ ತನ್ನ ಅಧಿಕಾರಾವಧಿಯಲ್ಲಿ ಏನು ಸಾಧಿಸಿದ್ದಾನೆ ಎಂಬುದರ ಮೇಲೆ ಜನರು ಗಮನ ಹರಿಸಬೇಕು ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಮೋದಿ ಪರ ಬೆಂಬಲ ನೀಡಿದ್ದಾರೆ.
2014 ರಲ್ಲಿ ಪ್ರಧಾನಿ ಮೋದಿಗೆ ಸಾರ್ವಜನಿಕರು ಅವರ ಪದವಿಯ ಆಧಾರದ ಮೇಲೆ ಮತ ಚಲಾಯಿಸಿದ್ದಾರೆಯೇ? ಅವರು ಸೃಷ್ಟಿಸಿದ ವರ್ಚಸ್ಸು ಚುನಾವಣೆಯಲ್ಲಿ ಗೆಲ್ಲಲು ಸಹಾಯ ಮಾಡಿತು ಎಂದು ಪವಾರ್ ಹೇಳಿದ್ದಾರೆ.
ಗ ಅವರು 9 ವರ್ಷಗಳಿಂದ ದೇಶವನ್ನು ಪ್ರತಿನಿಧಿಸುತ್ತಿದ್ದಾರೆ. ಅವರ ಪದವಿಯ ಬಗ್ಗೆ ಕೇಳುವುದು ಸರಿಯಲ್ಲ. ಹಣದುಬ್ಬರ ಮತ್ತು ನಿರುದ್ಯೋಗದಂತಹ ವಿಷಯಗಳ ಬಗ್ಗೆ ನಾವು ಅವರನ್ನು ಪ್ರಶ್ನಿಸಬೇಕು. ಸಚಿವರ ಪದವಿ ಮುಖ್ಯ ವಿಷಯವಲ್ಲ ಎಂದೂ ಅಜಿತ್ ಪವಾರ್ ಅಭಿಪ್ರಾಯ ಪಟ್ಟಿದ್ದಾರೆ.
ಮೋದಿಯವರ ಪದವಿಯ ಬಗ್ಗೆ ಸ್ಪಷ್ಟತೆ ಬಂದರೆ ಹಣದುಬ್ಬರ ಕಡಿಮೆಯಾಗಲಿದೆಯೇ? ಅವರ ಪದವಿಯ ಸ್ಥಿತಿಯನ್ನು ತಿಳಿದುಕೊಂಡ ನಂತರ ಜನರಿಗೆ ಉದ್ಯೋಗ ಸಿಗುತ್ತದೆಯೇ ಎಂದೂ ಪ್ರಶ್ನೆ ಮಾಡಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ಮೋದಿ ಅವರು ತಮ್ಮ ಕಾಲೇಜು ಪದವಿಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಬೇಕು ಎಂದು ಈ ಹಿಂದೆ ಹೇಳಿದ್ದರು. ಹಾಗೆ, “ತಮ್ಮ ಪ್ರಧಾನಿ ಎಷ್ಟು ಓದಿದ್ದಾರೆ ಎಂದು ತಿಳಿದುಕೊಳ್ಳುವ ಹಕ್ಕು ದೇಶಕ್ಕೆ ಇಲ್ಲವೇ? ನ್ಯಾಯಾಲಯದಲ್ಲಿ ತಮ್ಮ ಪದವಿಯನ್ನು ತೋರಿಸುವುದನ್ನು ಅವರು ಕಟುವಾಗಿ ವಿರೋಧಿಸಿದರು.