ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಹೋರಾಟಕ್ಕೆ ಒಂದು ಹಿನ್ನಡೆಯಾಗಿದೆ, ಹೋರಾಟದಿಂದ ಹಿಂದೆ ಸರಿಯಲ್ಲ. ಸುಪ್ರೀಂ ಕೋರ್ಟ್‌ಗೆ ಹೋಗ್ತೀನಿ ಎಂದು ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಹೋರಾಟಕ್ಕೆ ಒಂದು ಹಿನ್ನಡೆಯಾಗಿದೆ. ಆದ್ರೆ ಇದಕ್ಕಾಗಿ ಹೋರಾಟದಿಂದ ಹಿಂದೆ ಸರಿಯಲ್ಲ. ಸುಪ್ರೀಂ ಕೋರ್ಟ್‌ಗೆ ಹೋಗ್ತೀನಿ ಎಂದು ಹೇಳಿದ್ದಾರೆ.
ನ್ಯಾಯಾಲಯ ಯಾವ ವಿಚಾರವನ್ನಿಟ್ಟುಕೊಂಡು ಸಿಬಿಐ ತನಿಖೆಗೆ ಕೊಡಲು ನಿರಾಕರಿಸಿದೆ ಗೊತ್ತಿಲ್ಲ. ಆ ಅಂಶಗಳನ್ನು ನೋಡಿ ನಮ್ಮ ವಕೀಲರ ಜೊತೆ ಮಾತಾಡುತ್ತೇನೆ. ಬಳಿಕ ನಾವು ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ ಎಂದು ತಿಳಿಸಿದ್ದಾರೆ.