ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೇರಳ ವಿಧಾನ ಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಲಭಿಸಿದ ಬಳಿಕ ಮೊದಲ ಬಾರಿಗೆ ಪತ್ರಿಕೆಗಳಿಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಎಲ್ಡಿಎಫ್ ಪರವಾಗಿ ಕೇರಳದ ಜನತೆ ತೀರ್ಪು ನೀಡಿದ್ದಾರೆ. ಆದರೆ, ಈ ದೊಡ್ಡ ಗೆಲುವು ಸಂಭ್ರಮಿಸುವ ಕಾಲ ಇದಲ್ಲ. ಇದು ಕೋವಿಡ್ ವಿರುದ್ಧ ಹೋರಾಡುವಂತಹ ಸಮಯ ಎಂದಿದ್ದಾರೆ.
ಕೇರಳದಲ್ಲಿ ಈಗಿನ ಎಡಪಂಥೀಯ ಎಲ್ಡಿಎಫ್ ಕೂಟವು 140 ಸ್ಥಾನಗಳ ಪೈಕಿ 99 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದ್ದು, ಗೆಲುವು ಖಚಿತಪಡಿಸಿಕೊಂಡಿದೆ. ಈವರೆಗೆ ಕೇರಳದಲ್ಲಿ ಯಾವೊಂದು ಪಕ್ಷವೂ 5 ವರ್ಷಕ್ಕಿಂತ ಹೆಚ್ಚು ನಿರಂತರವಾಗಿ ಅಧಿಕಾರ ನಡೆಸಿದ ಇತಿಹಾಸ ಇಲ್ಲ. ಆದರೆ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಯ್ಯಪ್ಪ ಸ್ವಾಮಿ ಶಬರಿಮಲೆ ವಿವಾದದಿಂದ ಇತ್ತೀಚಿನ ಕೊರೋನಾ ಯೋಜನೆವರೆಗೆ ಹಲವು ವಿಚಾರಗಳನ್ನು ಯಶಸ್ವಿಯಾಗಿ ನಿಭಾಯಿಸಿ ಜನ ಮನ್ನಣೆ ಗಳಿಸಿದ್ದಾರೆ.
ಇನ್ನುಳಿದಂತೆ ಯುಡಿಎಫ್ 41 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.