ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರುತ್ತೆ ಎನ್ನುವ ಮಾತು ನಿಜ ಅಲ್ಲ, ನಟ ಚೇತನ್ ಹೀಗೆ ಹೇಳಿದ್ಯಾಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂತಾರ ಯಶಸ್ಸು ಯಾರೂ ಊಹಿಸದ ಮಟ್ಟಿಗೆ ಬೆಳೆದಿದೆ. ಭೂತಕೋಲದ ಬಗ್ಗೆ ಕೇಳರಿಯದವರು ಇದೀಗ ಅದರ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದಾರೆ. ಒಮ್ಮೆಯಾದರೂ ಕಣ್ಣಾರೆ ಕೋಲ ನೋಡಬೇಕು ಎನ್ನುವ ಆಸೆ ವ್ಯಕ್ತಪಡಿಸಿದ್ದಾರೆ.

ನಿರ್ದೇಶಕ ರಿಷಭ್ ಶೆಟ್ಟಿ ಅವರು ಭೂತಕೋಲ ನಮ್ಮ ಹಿಂದೂ ಸಂಸ್ಕೃತಿಯದ್ದು ಎಂದು ಹೇಳಿದ್ದು, ನಟ ಚೇತನ್ ಇದಕ್ಕೆ ತಕರಾರು ತೆಗೆದಿದ್ದಾರೆ.

ನಮ್ಮ ಕನ್ನಡದ ಚಲನಚಿತ್ರ ಕಾಂತಾರ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇದು ಖುಷಿಯ ವಿಷಯ. ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ರಿಷಭ್ ಶೆಟ್ಟಿ ಹೇಳಿದ್ದಾರೆ. ಆದರೆ ಇದು ನಿಜವಲ್ಲ. ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ಅವುಗಳನ್ನು ತೋರಿಸಬೇಕು ಎಂದು ಕೇಳಿಕೊಳ್ಳುತ್ತೇವೆ ಎಂದಿದ್ದಾರೆ. ಇದಕ್ಕೆ ರಿಷಭ್ ಶೆಟ್ಟಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!