ನಿಜವಾದ ಭಾರತೀಯ ಯಾರೆಂದು ನಿರ್ಧರಿಸೋದು ನ್ಯಾಯಾಧೀಶರ ವ್ಯಾಪ್ತಿಗೆ ಬರುವುದಿಲ್ಲ: ಪ್ರಿಯಾಂಕಾ ಗಾಂಧಿ ವಾದ್ರಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಿಜವಾದ ಭಾರತೀಯ ಯಾರೆಂದು ನಿರ್ಧರಿಸೋದು ಸುಪ್ರೀಂಕೋರ್ಟ್ ನ್ಯಾಯಾಧೀಶರ ವ್ಯಾಪ್ತಿಗೆ ಬರಲ್ಲ ಎಂದು ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. ಈ ಮೂಲಕ ಸಂಸದ ರಾಹುಲ್ ಗಾಂಧಿ ಪರ ಬ್ಯಾಟ್ ಬೀಸಿದ್ದಾರೆ .

ಭಾರತೀಯ ಸೇನೆ ವಿರುದ್ಧ ಸಂಸದ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ಸುಪ್ರೀಂಕೋರ್ಟ್​ ಛೀಮಾರಿ ಹಾಕಿ, ನೀವು ನಿಜವಾದ ಭಾರತೀಯನಾಗಿದ್ದರೆ ಈ ರೀತಿ ಮಾತನಾಡುತ್ತಿರಲಿಲ್ಲ ಎಂದು ಹೇಳಿತ್ತು.

ಚೀನಾ 2000 ಚದರ ಕಿಲೋಮೀಟರ್ ಭಾರತೀಯ ಭೂಮಿಯನ್ನು ವಶಪಡಿಸಿಕೊಂಡಿದೆ ಎಂದು ನಿಮಗೆ ಹೇಗೆ ಗೊತ್ತು? ನೀವು ನಿಜವಾದ ಭಾರತೀಯರಾಗಿದ್ದರೆ, ನೀವು ಹಾಗೆ ಹೇಳುತ್ತಿರಲಿಲ್ಲ ಎಂದು ನ್ಯಾಯಮೂರ್ತಿಗಳು ಪ್ರಶ್ನಿಸಿದ್ದರು.

ಇದೀಗ ಪ್ರಿಯಾಂಕಾ ಗಾಂಧಿ ನ್ಯಾಯಾಲಯದ ಈ ಹೇಳಿಕೆಗೆ ಪ್ರತಿಕ್ರಿಯಿಸಿ, ನಿಜವಾದ ಭಾರತೀಯ ಯಾರು ಮತ್ತು ಯಾರು ಅಲ್ಲ ಎಂಬುದನ್ನು ನ್ಯಾಯಮೂರ್ತಿಗಳು ನಿರ್ಧರಿಸಲು ಸಾಧ್ಯವಿಲ್ಲ ,ಇದು ಅವರ ವ್ಯಾಪ್ತಿಗೆ ಬರುವುದಿಲ್ಲ. ರಾಹುಲ್ ಗಾಂಧಿ ಅವರ ಹೃದಯದಲ್ಲಿ ಸೈನ್ಯದ ಬಗ್ಗೆ ಗೌರವ ಮತ್ತು ಮೆಚ್ಚುಗೆ ಇದೆ. ನನ್ನ ಸಹೋದರ ಎಂದಿಗೂ ಸೈನ್ಯದ ವಿರುದ್ಧ ಮಾತನಾಡುವುದಿಲ್ಲ, ಅವರಿಗೆ ಅವರ ಬಗ್ಗೆ ಹೆಚ್ಚಿನ ಗೌರವವಿದೆ. ಇದನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!