ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಬಿಜೆಪಿ ಹಮ್ಮಿಕೊಂಡಿದ್ದ ಏಕತಾ ಓಟದಲ್ಲಿ ಪಾಲ್ಗೊಂಡಿದ್ದ ವಿಜಯೇಂದ್ರ ಮಾತನಾಡಿ, ಇಳಿವಯಸ್ಸಿನಲ್ಲೂ ಹೆಚ್ ಡಿ ದೇವೇಗೌಡರು ಚನ್ನಪಟ್ಟಣದಲ್ಲಿ ನಿಖಿಲ್ ಪರ ಪ್ರಚಾರ ಮಾಡುವ ವಿಷಯ ಕಾಂಗ್ರೆಸ್ ಪಾಳೆಯದಲ್ಲಿ ಆತಂಕ ಮೂಡಿಸಿದೆ. ಅವರ ಉತ್ಸಾಹ ಎಲ್ಲರಿಗೂ ಒಂದು ಸ್ಫೂರ್ತಿಯಾಗಿದೆ ಎಂದು ತಿಳಿಸಿದ್ದಾರೆ.
ನಿಖಿಲ್ ಅವರು ಎನ್‌ಡಿಎ ಅಭ್ಯರ್ಥಿಯಾಗಿದ್ದು, ಅವರನ್ನು ಗೆಲ್ಲಿಸುವುದು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರ ಜವಾಬ್ದಾರಿಯಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.