ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಹಲವೆಡೆ ಇಂದೂ ಕೂಡ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳ ಕೆಲವೆಡೆ ಹಗುರ, ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಉತ್ತರ ಕನ್ನಡ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ತಿಳಿಸಿದೆ.