ಮೋದಿ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಬೇಕೆoಬುದು ದೇಶದ ಜನರ ಅಪೇಕ್ಷೆ: ಡಾ ಅಶ್ವಥ್ ನಾರಾಯಣ್

ಹೊಸದಿಗಂತ ವರದಿ, ಮೈಸೂರು:

ಎರಡು ಅವಧಿಯಲ್ಲಿ ಅನೇಕ ಜನಪಯೋಗಿ ಯೋಜನೆಗಳನ್ನು ಜಾರಿಗೊಳಿಸಿ, ಉತ್ತಮ ಆಡಳಿತವನ್ನು ನೀಡಿರುವ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಈ ದೇಶದ ಪ್ರಧಾನಮಂತ್ರಿಯಾಗಬೇಕೆoಬುದು ದೇಶದ ಜನರ ಅಪೇಕ್ಷೆಯಾಗಿರುವ ಕಾರಣ ಬರುವ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ೪೦೦ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯಾದ ಮಾಜಿ ಸಚಿವ ಡಾ.ಅಶ್ವಥ್ ನಾರಾಯಣ್ ಹೇಳಿದರು.

ಗುರುವಾರ ನಗರದ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮೈಸೂರು-ಕೊಡಗು ಲೋಕಸಭಾ ಚುನಾವಣಾ ಕಾರ್ಯಲಯವನ್ನು ಉದ್ಘಾಟಿಸಿದ ಬಳಿಕ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ಸ್ವಚ್ಚ ಹಾಗೂ ಕಳಂಕ ರಹಿತ ಆಡಳಿತವನ್ನು ಕಳೆದ ೧೦ ವರ್ಷಗಳ ಅವಧಿಯಲ್ಲಿ ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಕಸಿತ ಭಾರತಕ್ಕಾಗಿ ಶ್ರಮಿಸುತ್ತಿದ್ದಾರೆ. ಬಡವರು, ರೈತರು, ಮಹಿಳೆಯರು, ಯುವಕರು, ಮಧ್ಯಮವರ್ಗದವರು ಸೇರಿದಂತೆ ಎಲ್ಲಾ ವರ್ಗದವರ ಅಭಿವೃದ್ಧಿಗೆಂದು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮೋದಿಯವರ ಆಡಳಿತವನ್ನು ದೇಶದ ಜನರು ಮಾತ್ರವಲ್ಲ ಇಡೀ ಜಗತ್ತಿನ ಜನರು ಮೆಚ್ಚಿದ್ದಾರೆ. ಹಾಗಾಗಿ ದೇಶದ ಜನರು ಮೂರನೇ ಬಾರಿಗೂ ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಬೇಕೆoದು ಇಚ್ಚಿಸಿದ್ದಾರೆ. ಅಪೇಕ್ಷೆ ಪಡುತ್ತಿದ್ದಾರೆ. ಹಾಗಾಗಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ೩೭೦ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಗ್ರಾಮದಲ್ಲಿರುವ ಪ್ರತಿಯೊಬ್ಬರಿಗೂ ತಿಳಿಸುವ ಉದ್ದೇಶದಿಂದ ಗ್ರಾಮ ಚಲೋ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ.
ಒಗ್ಗಟ್ಟಿನ ಮಂತ್ರ; ಒಂದು ಕುಟುಂಬ ಎಂದ ಮೇಲೆ ಅಲ್ಲಿರುವ ಸದಸ್ಯರುಗಳೆಲ್ಲಾ ತಮ್ಮ ಅಭಿಪ್ರಾಯಗಳನ್ನು ಹೇಳುತ್ತಿರುತ್ತಾರೆ. ಆದರೆ ಎಲ್ಲರೂ ಒಂದಾಗಿ ಒಗ್ಗಟ್ಟಿನಿಂದ ಕೆಲಸ ಮಾಡಿ, ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುತ್ತೇವೆ. ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುವಂತೆ ದುಡಿಯುತ್ತೇವೆ ಎಂದು ತಿಳಿಸಿದರು.
ಮೈಸೂರು ಜಿಲ್ಲೆಯಲ್ಲಿ ಅನುಭವಿಗಳಿದ್ದಾರೆ. ಮೋದಿ ಮೂರನೇ ಬಾರಿ ಪ್ರಧಾನಿಯಾಗಬೇಕು ಅನ್ನೋದು ಎಲ್ಲರ ಆಶಯವಾಗಿದೆ. ೪೦೦ಕ್ಕೂ ಹೆಚ್ಚು ಮೈಸೂರು ಲೋಕಸಭಾ ಕ್ಷೇತ್ರದಲ್ಲೂ ಗೆಲ್ಲುವ ವಿಶ್ವಾಸವಿದೆ. ಮೈಸೂರಿನ ಶಾಸಕರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಮೈಸೂರು ಎಲ್ಲಾ ಕ್ಷೇತ್ರದಲ್ಲೂ ಮತ್ತೊಮ್ಮೆ ನಮ್ಮ ಅಭ್ಯರ್ಥಿ ಆಯ್ಕೆಯಾಗಬೇಕು. ಕಳೆದ ಬಾರಿಗಿಂತ ಹೆಚ್ಚಿನ ಮತ ಪಡೆಯಬೇಕು. ರಾಮಮಂದಿರದ ಶಿಲ್ಪಿ ಕಲ್ಲು ಮೈಸೂರಿನದ್ದೇ. ಮೈಸೂರು ಅಂದರೆ ಇಡೀ ವಿಶ್ವದ ಗಮನ ಸೆಳೆಯುತ್ತಿದೆ ಎಂದು ಡಾ ಅಶ್ವಥ್ ನಾರಾಯಾಣ್ ತಿಳಿಸಿದರು.
ಮೈಸೂರು, ಕೊಡಗು ಲೋಕಸಭಾ ಕ್ಷೇತ್ರ ಸಮನ್ವಯ ಕೇಂದ್ರ ಆಗುತ್ತೆ ಎಂದು ಹೇಳಿದರು.

ಮಾಜಿ ಶಾಸಕ ಅಪ್ಪಚ್ಚುರಂಜನ್ ಮಾತನಾಡಿ, ಎಲ್ಲಾ ವರ್ಗದವರನ್ನು ಮೇಲೆತ್ತಲು ಪ್ರಧಾನಿ ನರೇಂದ್ರಮೋದಿಯವರು ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಕೇಂದ್ರ ಸರ್ಕಾರ ಕಾಶ್ಮೀರದಲ್ಲಿ ೩೭೦ ನೇ ವಿಧಿಯನ್ನು ತೆಗೆದು ಹಾಕಿದೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರವನ್ನು ನಿರ್ಮಾಣ ಮಾಡಿದೆ. ಸುಜಲ ಧಾರಾ ಯೋಜನೆಯಡಿ ಮನೆ, ಮನೆಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುತ್ತಿದೆ. ಕೇಂದ್ರ ಸರ್ಕಾರ ನುಡಿದಂತೆ ನಡೆದಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕೊಡುಗಿನಿಂದ ಬಿಜೆಪಿ ಅಭ್ಯರ್ಥಿಗೆ ಒಂದು ಲಕ್ಷ ಮತಗಳ ಲೀಡ್‌ನ್ನು ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ವಿಭಾಗೀಯ ಪ್ರಭಾರಿ ಮೈ.ವಿ.ರವಿಶಂಕರ್, ಸಹ ಪ್ರಭಾರಿ ರಾಬೀನ್ ದೇವಯ್ಯ, ಮಾಜಿ ಸಚಿವ ಎಸ್.ಎ,.ರಾಮದಾಸ್ , ಸಿ.ಹೆಚ್.ವಿಜಯಶಂಕರ್, ಮೈಸೂರು ಮಹಾನಗರಪಾಲಿಕೆಯ ಮೇಯರ್ ಶಿವಕುಮಾರ್, ಬಿಜೆಪಿ ಮೈಸೂರು ನಗರಾಧ್ಯಕ್ಷ ಎಲ್.ನಾಗೇಂದ್ರ, ಗ್ರಾಮಾಂತರ ಜಿಲ್ಲಾಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ವಿಧಾನಪರಿಷತ್ ಮಾಜಿ ಸದಸ್ಯ ಸಿದ್ದರಾಜು, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇoದ್ರ, ಕೊಡಗು ಬಿಜೆಪಿ ಅಧ್ಯಕ್ಷ ರವಿಕಾಳಪ್ಪ, ಅಲ್ಪಸಂಖ್ಯಾತರ ಮೋರ್ಚಾದ ರಾಜ್ಯಾಧ್ಯಕ್ಷ ಅನಿಲ್ ಥಾಮಸ್, ಮೈಸೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕೇಬಲ್ ಮಹೇಶ್, ಹೆಚ್.ಜಿ.ಗಿರಿಧರ್, ರಘು, ಗ್ರಾಮಂತರ ಪ್ರಧಾನ ಕಾರ್ಯದರ್ಶಿಗಳಾದ ಬಾಲಕೃಷ್ಣ, ಮಹೇಶ್, ಜಯರಾಮೇಗೌಡ, ಮಾಧ್ಯಮ ಸಂಚಾಲಕ ಮಹೇಶ್ ರಾಜೇ ಅರಸ್, ಮುಖಂಡರಾದ ಎಸ್.ಜಯಪ್ರಕಾಶ್ (ಜೆಪಿ), ಸಂದೇಶ್ ಸ್ವಾಮಿ, ಕವೀಶ್‌ಗೌಡ, ಮಾಜಿ ಗ್ರಾಮಾಂತರ ಜಿಲ್ಲಾಧ್ಯಕ್ಷೆ ಮಂಗಳ ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!