June 6, 2026
Saturday, June 6, 2026
spot_img

ರಾಜ್ಯದಲ್ಲಿ ಅಡುಗೆ ಅನಿಲ ಅಭಾವ ತಡೆಗಟ್ಟುವುದು ಕೇಂದ್ರ ಸರಕಾರದ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಅಡುಗೆ ಅನಿಲ ಅಭಾವ ಉಂಟಾಗದಂತೆ ಗಮನ ಹರಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದ್ದು, ಇದನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯದ ಆಹಾರ ಸಚಿವರನ್ನು ಒಳಗೊಂಡಂತೆ ಅಧಿಕಾರಿಗಳ ಸಭೆ ನಡೆಸಲಾಗಿದೆ. ಅಡುಗೆ ಅನಿಲ ಸಮಸ್ಯೆ ಉದ್ಭವಿಸದಂತೆ ಕ್ರಮ ವಹಿಸಲು ಸೂಚಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರವು ಕೂಡ ವ್ಯತ್ಯಯವಾಗದಂತೆ ಪೂರೈಕೆ ಮಾಡುವುದು ಮುಖ್ಯವಾಗಿದೆ ಎಂದು ಹೇಳಿದ್ದಾರೆ.


ಒಳ ಮೀಸಲಾತಿ ಸಂಬಂಧ ಇದೇ ತಿಂಗಳ 27 ರಂದು ಬೆಂಗಳೂರಿನಲ್ಲಿ ಸಂಬಂಧಪಟ್ಟ ಸಚಿವರು ಮತ್ತು ಶಾಸಕರ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !