Wednesday, June 7, 2023

Latest Posts

ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ನಡೆಸುವುದು ಸತ್ಯ:ಯಡಿಯೂರಪ್ಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೈಂದೂರು ವಿಧಾನಸಭಾ ಕ್ಷೇತ್ರ ಸಹಿತವಾಗಿ ರಾಜ್ಯದಲ್ಲಿ 130  ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ನಡೆಸುವುದು ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.

ವಂಡ್ಸೆಯಲ್ಲಿ ಶನಿವಾರ ನಡೆದ ಉಡುಪಿ ಜಿಲ್ಲೆಯ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ಬೈಂದೂರು ಬಿಜೆಪಿ ಗುರುರಾಜ್ ಗಂಟಿಹೊಳೆಯವರು 25 ರಿಂದ 30 ಸಾವಿರ ಮತಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಲಿದ್ದಾರೆ. ಬೈಂದೂರು ಕ್ಷೇತ್ರಕ್ಕೆ ಯೋಗ್ಯ, ಪ್ರಾಮಾಣಿಕ ಅಭ್ಯರ್ಥಿಯನ್ನು ಪಕ್ಷ ನೀಡಿದೆ. ಅವರನ್ನು ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಗುರುರಾಜ್ ಗಂಟಿಹೊಳೆಯವರು ಚಪ್ಪಲಿಯನ್ನು ಹಾಕದೆ ಪಕ್ಷಕ್ಕಾಗಿ ಶ್ರಮಿಸುತ್ತಿದ್ದಾರೆ. ಅವರಿಗೆ ದೇವರು ಇನ್ನಷ್ಟು ಶಕ್ತಿಯನ್ನು ನೀಡಲಿದ್ದಾರೆ. ಶಾಸಕನಾಗಿ ವಿಧಾನಸಭಾ ಪ್ರವೇಶ ಮಾಡಲಿದ್ದಾರೆ ಎಂದರು.

ಪ್ರಧಾನ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಮೊದಲಾದವರು ರಾಜ್ಯಾದ್ಯಂತ ಪ್ರಸಾದ ಮಾಡುತ್ತಿದ್ದಾರೆ. ಬಿಜೆಪಿ ೧೩೦ ಸೀಟುಗಳನ್ನು ಗೆಲ್ಲಲಿದ್ದೇವೆ ಎಂಬ ಭರವಸೆಯನ್ನು ಅವರಿಗೆ ಈಗಾಗಲೇ ನೀಡಿದ್ದೇವೆ. ಹೀಗಾಗಿ ನಾವೆಲ್ಲರೂ ಸೇರಿ ಗುರುರಾಜ್ ಗಂಟಿಹೊಳೆಯವರನ್ನು ಗೆಲ್ಲಿಸಬೇಕು. ನಿಮ್ಮೆಲ್ಲರ ಮೇಲೆ ಪೂರ್ಣ ವಿಶ್ವಾಸವಿದೆ ಎಂದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!