ಸರ್ಕಾರ ಸ್ವಲ್ಪ ಮಟ್ಟಿಗೆ ಶೇಕ್ ಆಗಿರೋದು ನಿಜ: ಸಚಿವ ಡಾ.ಜಿ.ಪರಮೇಶ್ವರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬಳಿಕ ಸರ್ಕಾರ ಸ್ವಲ್ಪ ಮಟ್ಟಿಗೆ ಶೇಕ್ ಆಗಿರೋದು ಹೌದು, ಆದರೆ ಇದನ್ನು ನಾವು ಸರಿಪಡಿಸಿಕೊಂಡು ಆಡಳಿತ ಮುಂದುವರಿಸ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಸರ್ಕಾರ ಸ್ವಲ್ಪ ಮಟ್ಟಿಗೆ ಶೇಕ್ ಆಗಿರೋದು ಹೌದು, ಇಲ್ಲ ಅಂತ ಹೇಳಿದರೆ ನಾನು ಸುಳ್ಳು ಹೇಳಿದಂತಾಗುತ್ತದೆ. ಆದರೆ ಇದನ್ನೆಲ್ಲ ನಾವು ಸರಿಪಡಿಸಿಕೊಂಡು ಆಡಳಿತ ಮುಂದುವರಿಸುತ್ತೇವೆ. ಸಂಪುಟ ಸಭೆಯಲ್ಲೂ ನಾವ್ಯಾರೂ ಬಿಜೆಪಿ ಹುನ್ನಾರಕ್ಕೆ ಬಲಿಯಾಗೋದು ಬೇಡ, ಕಾನೂನು ಸಮರ ಮುಂದುವರಿಸಿಕೊಂಡು ಆಡಳಿತ ನಡೆಸುವ ತಿರ್ಮಾನ ಮಾಡಿದ್ದೇವೆ. ಆದರೆ ಬಿಜೆಪಿ ಹೇಗಾದರೂ ಮಾಡಿ ಈ ಸರ್ಕಾರ ಬೀಳಿಸುವ ಸ್ಕೀಂ ಹಾಕಿಕೊಂಡಿದೆ. ಸಿದ್ದರಾಮಯ್ಯ ಮೂಲಕ ಸರ್ಕಾರ ಅಸ್ಥಿರಗೊಳಿಸುವ ಉದ್ದೇಶವನ್ನು ಹೊಂದಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಬಿಜೆಪಿಯವರೂ ಹೋರಾಟ ಮಾಡಲಿ, ಅದು ಅವರ ಹಕ್ಕು ಹಾಗೆಯೇ ನಾವೂ ಹೋರಾಟ ಮಾಡ್ತೀವಿ, ಇದು ನಮ್ಮ ಹಕ್ಕು. ಜಿಲ್ಲೆ, ತಾಲ್ಲೂಕುಗಳಲ್ಲಿ ನಮ್ಮ ಕಾರ್ಯಕರ್ತರು ಹೋರಾಟಕ್ಕೆ ಇಳಿಯುವ ಅನಿವಾರ್ಯತೆ ಬಂದಿದೆ. ಅವರಿಗೆ ರಾಜಕೀಯ ಉತ್ತರ ಕೊಡಲು ರಾಜಕೀಯ ಹೋರಾಟವೇ ಮಾಡಬೇಕು. ನಾಳೆ (ಆ.19) ರಾಜ್ಯಾದ್ಯಂತ ಪಕ್ಷದಿಂದ ಶಾಂತಿಯುತ ಪ್ರತಿಭಟನೆಗೆ ಅಧ್ಯಕ್ಷರು ಕರೆ ಕೊಟ್ಟಿದ್ದಾರೆ ಎಂದರು.

ರಾಜ್ಯಪಾಲರ ತೀರ್ಮಾನವೂ ರಾಜಕೀಯದ್ದು, ಸಚಿವ ಸಂಪುಟ ತೀರ್ಮಾನವನ್ನೇ ಅವರು ತಿರಸ್ಕರಿಸಿದ್ದಾರೆ. ಉದ್ದೇಶಪೂರ್ವಕವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಜೊಲ್ಲೆ, ನಿರಾಣಿ, ಹೆಚ್‌ಡಿಕೆ, ಜನಾರ್ದನ ರೆಡ್ಡಿ ವಿಚಾರದಲ್ಲಿ ಅನುಮತಿ ಕೊಡದೇ ಇರೋದು ನಮಗೆ ಗೊತ್ತಿತ್ತು. ನಾವು ಇಲ್ಲಿಯವರೆಗೆ ತಲೆಕೆಡಿಸಿಕೊಂಡಿರಲಿಲ್ಲ. ದ್ವೇಷದ ರಾಜಕಾರಣ ಮಾಡೋದು ಬೇಡ ಅಂತ ಸುಮ್ಮನಿದ್ದೆವು. ಈಗ ನಾವು ಕಾನೂನು ಚೌಕಟ್ಟಿನಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದಿದ್ದಾರೆ.

 

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!