ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಹೊಣೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿನ್ನಸ್ವಾಮಿಯಲ್ಲಿ ಇಂತಹ ದುರ್ಘಟನೆ ಆಗಬಾರದಿತ್ತು. ನಿರೀಕ್ಷೆ ಮೀರಿ ಅಭಿಮಾನಿಗಳು ಬಂದಿದ್ದರು. ಇನ್ನೂ ಒಳ್ಳೆಯ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಇದರ ಹೊಣೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆ. ನಮ್ಮ ಕಡೆಯಿಂದ ಲೋಪ ಆಗಿರುವುದು ಹೌದು ಎಂದು ಘಟನೆ ಬಗ್ಗೆ ಬೀಸರ ವ್ಯಕ್ತಪಡಿಸಿದ್ದಾರೆ.