ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿರುವುದು ಸತ್ಯ. ಹೀಗಾಗಿ ಬಿಜೆಪಿ ಮಾಜಿ ಶಾಸಕ ಗುತ್ತೇದಾರ್ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ ಮಾಡುವ ಮೂಲಕ ಮತಗಳ್ಳತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಆಳಂದ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಸುಭಾಷ್ ಗುತ್ತೇದಾರ್ ಅವರ ಮೇಲೆ ಚಾರ್ಜ್ಶೀಟ್ ಸಲ್ಲಿಕೆಯಾಗಿರುವ ಬಗ್ಗೆ ಕೇಳಿದಾಗ, ಈ ಪ್ರಕರಣದಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಅಕ್ರಮ ನಡೆದಿರುವುದು ಸತ್ಯ. ಗಂಭೀರವಾದ ತನಿಖೆ ನಡೆಸಿ, ಚಾರ್ಜ್ಶೀಟ್ ಹಾಕಿದ್ದಾರೆ. ಈ ವಿಚಾರದ ಬಗ್ಗೆ ನಮ್ಮ ಶಾಸಕರು ಸದನದಲ್ಲಿ ದನಿ ಎತ್ತಲಿದ್ದಾರೆ. ಇದು ಕೇವಲ ಕರ್ನಾಟಕದ ದನಿಯಲ್ಲ. ಇಡೀ ಭಾರತದ ದನಿ. ಜನರ ಕೃಪೆಯಿಂದ ನಾವು ಇಲ್ಲಿ ಅಧಿಕಾರಕ್ಕೆ ಬಂದಿದ್ದೇವೆ ಎಂದರು.
ತನಿಖೆ ನಡೆಸಿ, ಕ್ರಮ ತೆಗದುಕೊಂಡಿದ್ದಾರೆ. ಫೋನ್‌ನಲ್ಲಿ ದಾಖಲೆಗಳು ಡಿಲೀಟ್ ಆಗಿವೆ ಎಂದು ಇದೆ. ಇದರ ಬಗ್ಗೆ ವರದಿ ತರಿಸಿಕೊಂಡು ನೋಡಿ ಆನಂತರ ಮಾತನಾಡುತ್ತೇನೆ. ರಾಹುಲ್ ಗಾಂಧಿ ಅವರ ಸಲಹೆಯಂತೆ ಲೀಗಲ್ ಬ್ಯಾಂಕ್ ಅನ್ನು ಪ್ರತಿ ಕ್ಷೇತ್ರದಲ್ಲೂ ಪ್ರಾರಂಭ ಮಾಡಬೇಕು. ಈ ವಿಚಾರದ ಬಗ್ಗೆ ನಾವು ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.
ಮತಗಳ್ಳತನ ನಡೆದಿರೋದು ನಿಜಾನೆ, ಕ್ರಮ ತೆಗೆದುಕೊಳ್ಳದೆ ಇರೋದಿಲ್ಲ: ಡಿಸಿಎಂ ಡಿಕೆಶಿ

