ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುಧಾಕರ್ ಗೆದ್ರೆ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿ ಪೇಚಿಗೆ ಸಿಲುಕಿದ್ದ ಶಾಸಕ ಪ್ರದೀಪ್ ಈಶ್ವರ್ ಇದೀಗ ಯಾವ ಕಾರಣಕ್ಕೂ ರಾಜೀನಾಮೆ ನೀಡೋದಿಲ್ಲ ಎಂದು ಹೇಳಿದ್ದಾರೆ.
ಪ್ರದೀಪ್ ಈಶ್ವರ್ ರಾಜೀನಾಮೆ ನೀಡಬೇಕೆಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜೀನಾಮೆಗೆ ಆಗ್ರಹ ಮಾಡಿದ ವಿರೋಧ ಪಕ್ಷದವರಿಗೆ ಧನ್ಯವಾದ. ಸುಧಾಕರ್ ಅವರು ನನ್ನ ಸವಾಲು ಸ್ವೀಕಾರ ಮಾಡಿರಲಿಲ್ಲ. ನನ್ನ ಸವಾಲು ಸ್ವೀಕರಿಸುತ್ತಿದ್ದರೆ ನಾನು ರಾಜೀನಾಮೆ ನೀಡುತ್ತಿದ್ದೆ ಎಂದು ಹೇಳಿದ್ದಾರೆ.
ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಹಣದ ಹೊಳೆ ಹರಿದಿದೆ. ಬಿಜೆಪಿಯವರು ನಾನು ರಾಜೀನಾಮೆ ಕೊಡಬಹುದು ಅಂತ ಕಾಯ್ತಿದ್ದಾರೆ. ನಾನು ರಾಜೀನಾಮೆ ಕೊಟ್ರೆ ನೆಮ್ಮದಿಯಾಗಿ ಇರಬಹುದು ಅಂದುಕೊಂಡಿದ್ದಾರೆ. ಆದರೆ ಅವರಿಗೆ ನಾನು ಆ ನೆಮ್ಮದಿ ಕೊಡಲ್ಲ ಎಂದಿದ್ದಾರೆ.