ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಹಲ್ಲೆಯ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರತಿಕ್ರಿಯಿಸಿದ್ದಾರೆ. ಪೊಲೀಸರು ಈಗಾಗಲೇ ನಿಮಗೆ ಇದರ ಬಗ್ಗೆ ಎಲ್ಲಾ ಮಾಹಿತಿಯನ್ನು ಒದಗಿಸಿದ್ದಾರೆ. ಈ ಹಲ್ಲೆಗೆ ಕಾರಣವೇನೆಂಬುದರ ತನಿಖೆ ನಡೆಯುತ್ತಿದೆ ಎಂದಿದ್ದಾರೆ.
ಮುಂಬೈ ಇನ್ನು ಮುಂದೆ ಸುರಕ್ಷಿತ ಸ್ಥಳವಲ್ಲ ಎಂದು ವಿರೋಧ ಪಕ್ಷದ ನಾಯಕರು ಮಾಡುತ್ತಿರುವ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ದೇವೇಂದ್ರ ಫಡ್ನವೀಸ್, ದೇಶದ ಎಲ್ಲಾ ಮಹಾ ನಗರಗಳ ಪೈಕಿ ಮುಂಬೈ ಅತ್ಯಂತ ಸುರಕ್ಷಿತ ನಗರ ಎಂದು ನಾನು ಭಾವಿಸುತ್ತೇನೆ. ಕೆಲವೊಮ್ಮೆ ಕೆಲವು ಘಟನೆಗಳನ್ನು ಗಂಭೀರವಾಗಿ ಪರಿಗಣಿಸಬೇಕಾದದ್ದು ನಿಜ. ಆದರೆ, ಈ ಘಟನೆಯಿಂದಾಗಿ ಮುಂಬೈ ಅಸುರಕ್ಷಿತವಾಗಿದೆ ಎಂದು ಹೇಳುವುದು ಅನ್ಯಾಯವಾಗುತ್ತದೆ. ಏಕೆಂದರೆ ಇದು ಮುಂಬೈ ನಗರದ ಪ್ರತಿಷ್ಠೆಯನ್ನು ಹಾಳು ಮಾಡುತ್ತದೆ. ಮುಂಬೈ ಇನ್ನಷ್ಟು ಸುರಕ್ಷಿತವಾಗುವಂತೆ ನೋಡಿಕೊಳ್ಳಲು ಸರ್ಕಾರ ಖಂಡಿತವಾಗಿಯೂ ಪ್ರಯತ್ನಿಸುತ್ತದೆ ಎಂದಿದ್ದಾರೆ.