ವಿರೋಧ ಪಕ್ಷಗಳು ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭ ಬಹಿಷ್ಕರಿಸುವುದು ತಪ್ಪು: ಮಾಯಾವತಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನೂತನ ಸಂಸತ್‌ ಭವನವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಲೋಕಾರ್ಪಣೆ ಮಾಡುವ ಸಮಾರಂಭವನ್ನು ವಿರೋಧ ಪಕ್ಷಗಳು ಬಹಿಷ್ಕರಿಸುವುದು ಸರಿಯಲ್ಲ ಎಂದು ಬಹುಜನ ಸಮಾಜವಾದಿ ಪಕ್ಷದ (ಬಿಎಸ್‌ಪಿ) ನಾಯಕಿ ಮಾಯಾವತಿ ಅಭಿಪ್ರಾಯಪಟ್ಟಿದ್ದಾರೆ.

ಪ್ರಧಾನಿ ಮೋದಿ ಅವರು ಮೇ 28ರಂದು ನೂತನ ಸಂಸತ್‌ ಭವನ ಉದ್ಘಾಟಿಸಲಿದ್ದಾರೆ. ಆದರೆ, ಈ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅಹ್ವಾನ ನೀಡಿಲ್ಲ. ಇದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡುವ ಅವಮಾನ ಎಂದು ವಿರೋಧ ಪಕ್ಷಗಳು ಕಿಡಿಕಾರಿವೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಮಾಯಾವತಿ, ನೂತನ ಭವನವನ್ನು ನಿರ್ಮಾಣ ಮಾಡಿರುವ ಕೇಂದ್ರ ಸರ್ಕಾರವು, ಉದ್ಘಾಟನೆ ಮಾಡುವ ಹಕ್ಕನ್ನೂ ಹೊಂದಿದೆ ಎಂದು ಹೇಳಿದ್ದಾರೆ.

‘ಉದ್ಘಾಟನೆ ಸಮಾರಂಭದ ವಿಚಾರವನ್ನು ವಿರೋಧ ಪಕ್ಷಗಳು ಆದಿವಾಸಿ ಮಹಿಳೆಯ ಘನತೆಯೊಂದಿಗೆ ತಳುಕು ಹಾಕುತ್ತಿರುವುದು ತಪ್ಪು. ರಾಷ್ಟ್ರಪತಿ ಚುನಾವಣೆ ವೇಳೆ ಅವಿರೋಧ ಆಯ್ಕೆಗೆ ಅನುವು ಮಾಡಿಕೊಟ್ಟಿರಲಿಲ್ಲ ಎಂಬುದನ್ನೂ ಅವರು (ಇದೇ ನೆಲೆಯಲ್ಲಿ ಯೋಚಿಸಬೇಕು ಎಂದು ಹೇಳಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೆ ತಮನ್ನು ಆಹ್ವಾನಿಸಿರುವುದಕ್ಕೆ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಹೇಳಿರುವ ಮಾಯಾವತಿ, ಈಗಾಗಲೇ ನಿಗದಿಯಾಗಿರುವ ಕಾರ್ಯಕ್ರಮಗಳ ಕಾರಣದಿಂದ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದೂ ತಿಳಿಸಿದ್ದಾರೆ.

https://twitter.com/Mayawati/status/1661663121566728193

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!