ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್‌ಐಆರ್ ದಾಖಲಿಸುವ ಮೊದಲು ದಾಖಲೆಗಳ ಸಂಗ್ರಹಣೆ ಮಾಡುವುದು ಕಾಯ್ದೆಯ ಉಲ್ಲಂಘನೆ ಎಂದು ಹೈಕೋರ್ಟ್ ಹೇಳಿದೆ.
ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ-1983ರ ಸೆಕ್ಷನ್ 17ಎ ಅಡಿಯಲ್ಲಿ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ಲೋಕಾಯುಕ್ತ ಪೊಲೀಸರು ಅನಾಮಧೇಯ ದೂರು ಆಧರಿಸಿ ಸರ್ಕಾರಿ ಸೇವಕರ ವಿರುದ್ಧ ಎಫ್‌ಐಆರ್ ದಾಖಲಿಸುವುದು ತಪ್ಪು ಎಂದು ಹೇಳಿದೆ.
ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯುವ ಮುನ್ನ ವಿವರವಾದ ಪ್ರಾಥಮಿಕ ತನಿಖೆ ನಡೆಸುವುದು, ಅಧಿಕಾರಿಗಳನ್ನು ವಿಚಾರಣೆಗೆ ಕರೆಯುವುದು ಮತ್ತು ದಾಖಲೆ ಸಂಗ್ರಹಿಸುವುದು, ದಸ್ತಾವೇಜು ನಿರ್ಮಿಸುವುದನ್ನು ಮಾಡುವಂತಿಲ್ಲ. ಹೀಗೆ ಮಾಡಿದರೆ ಅದು ಕಾಯ್ದೆಯ ಸೆಕ್ಷನ್ 17ಎ ಅನ್ನು ರೂಪಿಸಿದ ಶಾಸಕಾಂಗದ ಉದ್ದೇಶವನ್ನೇ ನಿಷ್ಕ್ರಿಯಗೊಳಿಸುತ್ತದೆ ಎಂದು ಪೀಠ ಹೇಳಿದೆ.