ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದನ್ನು ನಾವೆಲ್ಲರೂ ಖಂಡಿಸಬೇಕು. ತಪ್ಪಿತಸ್ಥನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಸುಪ್ರೀಂಕೋರ್ಟ್ ನಲ್ಲಿ ಶೂ ಎಸೆತ ಪ್ರಕರಣದ ಬಗ್ಗೆ ಕೇಳಿದಾಗ, ‘ಮುಖ್ಯ ನ್ಯಾಯಮೂರ್ತಿಯವರು ತಪ್ಪಿತಸ್ಥನ ವಿರುದ್ಧ ಕ್ರಮ ತೆಗದುಕೊಳ್ಳಬೇಡಿ ಎಂದಿದ್ದಾರೆ. ಆದರೂ ಸುಮೋಟೋ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು’ ಎಂದರು.