Wednesday, October 29, 2025

WEATHER | ವಾಯುಭಾರ ಕುಸಿತದ ಜೊತೆಗೆ ಇನ್ನೂ ಒಂದು ವಾರ ಸಿಕ್ಕಾಪಟ್ಟೆ ಮಳೆ ಇದ್ಯಂತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಸುರಿಯುತ್ತಿರುವ ಮಳೆ ಇನ್ನೂ ಮುಂದುವರಿಯುವ ಲಕ್ಷಣಗಳಿವೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂದಿನ ಒಂದು ವಾರದವರೆಗೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ. ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಹವಾಮಾನದಲ್ಲಿ ಬದಲಾವಣೆ ಉಂಟಾಗಿ, ಮಳೆ ಚಟುವಟಿಕೆಗಳು ತೀವ್ರಗೊಳ್ಳಲಿವೆ.

ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ನಿರೀಕ್ಷೆಯಿದೆ. ವಿಶೇಷವಾಗಿ ಅಕ್ಟೋಬರ್ 27 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಸಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ ಮೋಡಕವಿದ ವಾತಾವರಣ ಮುಂದುವರಿದಿದ್ದು, ಹಗುರದಿಂದ ಮಧ್ಯಮ ಮಟ್ಟದ ಮಳೆಯು ನಗರದಲ್ಲಿ ಸಾಮಾನ್ಯವಾಗಿದೆ.

ಹವಾಮಾನ ಇಲಾಖೆ ಅಕ್ಟೋಬರ್ 25 ಮತ್ತು 26 ರಂದು ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಹಾಗೂ ಅಕ್ಟೋಬರ್ 26 ರಂದು ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಮತ್ತು 27 ರಂದು ಆರೆಂಜ್ ಅಲರ್ಟ್ ಪ್ರಕಟಿಸಿದೆ. ಮೀನುಗಾರರು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

error: Content is protected !!