August 15, 2026
Saturday, August 15, 2026
spot_img

WEATHER | ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಸಾಮಾನ್ಯ ಮಳೆಯಾಗಲಿದೆಯಂತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಯ ನಡುವೆಯೂ ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಹೆಚ್ಚಾಗಿರಲಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !