ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, August 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪೆಗಾಸಸ್ ಬೇಹುಗಾರಿಕೆ ಆರೋಪ ಆಧಾರ ರಹಿತ: ಐಟಿ ಸಚಿವ ಅಶ್ವಿನಿ ವೈಷ್ಣವ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಇಸ್ರೇಲಿನ ಪೆಗಾಸಸ್ ತಂತ್ರಾಂಶದ ಮೂಲಕ ಬೇಹುಗಾರಿಕೆ ನಡೆಸಲಾಗುತ್ತಿದೆ ಎಂಬ ವರದಿಯು ಆಧಾರ ರಹಿತ ಆರೋಪವಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ‘ಈ ಬೇಹುಗಾರಿಕೆ ಆರೋಪದ ಹಿಂದೆ ಎಲ್ಲ ಪ್ರತಿಪಕ್ಷಗಳ ಕೈವಾಡವಿದೆ. ಪೆಗಾಸಸ್ ಮೂಲಕ ಗೂಢಾಚಾರಿಕೆ ನಡೆಸಿರುವ ಬಗ್ಗೆ ಯಾವುದೇ ಆಧಾರಗಳಿಲ್ಲದೇ ಆರೋಪಿಸಲಾಗುತ್ತಿದೆ’ ಎಂದು ಹೇಳಿದರು.
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಈ ಕುರಿತು ಹೇಳಿಕೆ ನೀಡುತ್ತಿದ್ದಂತೆ ಪ್ರತಿಪಕ್ಷ ನಾಯಕರು ಕೆಂಡಾಮಂಡಲರಾದರು. ಟಿಎಂಸಿ ಸಂಸದ ಶಾಂತಾನು ಸೇನ್ ಮಧ್ಯ ಪ್ರವೇಶಿಸುತ್ತಿದ್ದಂತೆ ಕಲಾಪದಲ್ಲಿ ಗದ್ದಲ ಗಲಾಟೆ ಹೆಚ್ಚಾಯಿತು. ಸಚಿವರು ನೀಡಬೇಕಾದ ಹೇಳಿಕೆಯ ಕಾಗದ ಪತ್ರಗಳನ್ನು ಹರಿದು ಹಾಕಿ, ಅವುಗಳನ್ನು ಗಾಳಿಯಲ್ಲಿ ತೂರಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss