ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ನಂದಿನಿ ಹಾಲಿನ ಬೆಲೆ ಏರಿಕೆಯಾಗಿದ್ದು, ಮಧ್ಯಮ ವರ್ಗದ ಜನರಿಗೆ ಅಸಮಾಧಾನ ಮೂಡಿಸಿದೆ. ಇನ್ನು ಬಿಜೆಪಿ ನಾಯಕರು ಹಾಲಿನ ದರ ಹೆಚ್ಚಳ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಆದರೆ ಈ ಮಧ್ಯ ಡಿಸಿಎಂ ಡಿಕೆ ಶಿವಕುಮಾರ್ ಉಲ್ಟಾ ಹೇಳಿಕೆಯೊಂದನ್ನು ನೀಡಿದ್ದಾರೆ.
ನನ್ನ ಪ್ರಕಾರ ಇನ್ನೂ ಬೆಲೆ ಏರಿಕೆ ಜಾಸ್ತಿ ಮಾಡಬೇಕಿತ್ತು. ಯಾರು ಬೇಕಾದ್ರು ವಿವಾದ ಮಾಡಲಿ, ಯಾರು ಬೇಕಾದ್ರು ಬೈಯಲಿ, ಬಟ್ ರೇಟ್ ಇನ್ನೂ ಜಾಸ್ತಿ ಮಾಡಬಹುದಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ವಿರೋಧ ವ್ಯಕ್ತಪಡಿಸುವುದರಿಂದಲೇ ಬಿಜೆಪಿಯವರು ರೈತರ ವಿರೋಧಿಗಳು ಎಂಬುದು ಅರ್ಥ ಆಗುತ್ತದೆ. 2 ರೂ. ಜಾಸ್ತಿ ಅಗಿರೋದು ರೈತರಿಗೆ ತಲುಪುತ್ತದೆ. ರೈತರು ಎಷ್ಟು ಕಷ್ಟ, ಎಷ್ಟು ಸಂಕಷ್ಟದಲ್ಲಿ ಇದ್ದಾರೆ ಅಂತ ಬಿಜೆಪಿ ಅವರಿಗೆ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.