ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮಗೆ ಐಟಿ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮಗೆ ಐಟಿ ಶಾಕ್ ನೀಡಿದ್ದು, ಇಂದು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಅವರಿಗೆ ನೋಟಿಸ್ ನೀಡಿದ್ದು, ಅವರಿಗೆ ಸಂಬಂಧಿಸಿದ ಆಸ್ತಿ ವಿವರದ ಬಗ್ಗೆ ಮಾಹಿತಿಯನ್ನು ನೀಡುವಂತೆ ಸೂಚಿಸಿದ್ದಾರೆ.
ಈ ಕುರಿತು ಪುತ್ರ ಮಾಜಿ ಸಚಿವ ಹೆಚ್ ಡಿ ರೇವಣ್ಣ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ ಅಧಿಕಾರಿಗಳಿಂದ ನನ್ನ ತಾಯಿಗೆ ನೋಟಿಸ್ ನೀಡಿದ್ದಾರೆ. ಆಸ್ತಿ ವಿವರದ ಮಾಹಿತಿ ಕೋರಿದ್ದಾರೆ. ಒಬ್ಬ ಮಾಜಿ ಪ್ರಧಾನಿ ಪತ್ನಿಗೆ ನೋಟಿಸ್ ಕೊಟ್ಟಿದ್ದಾರೆ. ಆದ್ರೇ ಇದಕ್ಕೆ ಉತ್ತರ ಕೊಡೋದು ಗೊತ್ತಿದೆ. ನನಗೆ ಕೊಟ್ಟಿದ್ದರೆ ಬೇಜಾರು ಇರಲಿಲ್ಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾವು ಕಬ್ಬು ಬೆಳೆದಿದ್ದೇವೆ. ಆಲೂಗಡ್ಡೆ ಬಳೆದಿದ್ದೇವೆ. ನಾವೇನು ಅಕ್ರಮವಾಗಿ ಕೋಟಿ ಕೋಟಿ ಸಂಪಾದಿಸಿಲ್ಲ. ಜೆಡಿಎಸ್ ಮುಖಂಡರಿಗೆ ಆಯ್ಕೆ ಮಾಡಿ ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!