ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಜಾಮೀನಿನ ಮೇಲೆ ಬಿಡುಗಡೆಯಾಗುವ ನಿರೀಕ್ಷೆಯಲ್ಲಿದ್ದಾರೆ ಆದರೆ ಐಟಿ ಅಧಿಕಾರಿಗಳು ಅವರಿಗೆ ಮತ್ತೊಂದು ಶಾಕ್ ನೀಡಿದ್ದಾರೆ.
ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಬಿಡುಗಡೆ ಆದೇಶ ಸೆ.27ರಂದು ಹೊರಬೀಳಲಿದೆ. ಈ ನಡುವೆ ದರ್ಶನ್ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಐಟಿ ಅಧಿಕಾರಿಗಳು ಬಳ್ಳಾರಿ ಜೈಲಿಗೆ ನುಗ್ಗಿ ದರ್ಶನ್ ವಿಚಾರಣೆ ನಡೆಸಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣ ಮುಚ್ಚಿಹಾಕಲು ಬಳಸಿದ್ದ ಹಣ, ದರ್ಶನ್ ಮನೆ ಮೇಲೆ ನಡೆದ ದಾಳಿ ವೇಳೆ ಸಿಕ್ಕ ಹಣ ಸೇರಿದಂತೆ ಇನ್ನಿತರ ವಿಚಾರಗಳ ವಿಚಾರಣೆ ನಡೆಸಲು ಐಟಿ ಅಧಿಕಾರಿಗಳು ಬಳ್ಳಾರಿ ಜೈಲಿಗೆ ಆಗಮಿದ್ದು. ನಟ ದರ್ಶನ್ ನಗು ನಗುತ್ತಲೇ ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಿದ್ದಾರೆ.