September 21, 2026
Monday, September 21, 2026
spot_img

ರಾಜ್ಯದಿಂದ ಈ ಸಾಲಿನಲ್ಲಿ ಬರೋಬ್ಬರಿ 5.5 ಲಕ್ಷ ಕೋಟಿ ರೂಪಾಯಿ ಐಟಿ ಉತ್ಪನ್ನ ರಫ್ತು: ಸಚಿವ ಪ್ರಿಯಾಂಕ್ ಖರ್ಗೆ


ಹೊಸದಿಗಂತ ಡಿಜಿಟಲ್ ಡೆಸ್ಕ್:


2025-26ನೇ ಸಾಲಿನಲ್ಲಿ ರಾಜ್ಯದಿಂದ 5.5 ಲಕ್ಷ ಕೋಟಿ ರೂಪಾಯಿ ಮೌಲ್ಯದ ಐಟಿ ಉತ್ಪನ್ನಗಳನ್ನು ರಫ್ತು ಮಾಡಲಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ವಿಧಾನಸಭೆಯಲ್ಲಿಂದು ಬಿಜೆಪಿಯ ಶಾಸಕ ವೇದವ್ಯಾಸ ಕಾಮತ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಪ್ರಿಯಾಂಕ್ ಖರ್ಗೆ, 2024-25ರಲ್ಲಿ 5.4 ಲಕ್ಷ ಕೋಟಿ ರೂಪಾಯಿ, 2023-24ರಲ್ಲಿ 4.09 ಲಕ್ಷ ಕೋಟಿ ರೂಪಾಯಿ ಹಾಗೂ 2022-23ರಲ್ಲಿ 3.55 ಲಕ್ಷ ಕೋಟಿ ರೂಪಾಯಿ ಐಟಿ ಉತ್ಪನ್ನಗಳನ್ನು ರಾಜ್ಯದಿಂದ ರಫ್ತು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.


ರಾಜ್ಯದ ಒಟ್ಟು ಜಿಡಿಪಿಯಲ್ಲಿ ಬೆಂಗಳೂರಿನ ಕೊಡುಗೆ ಶೇಕಡಾ 40ರಷ್ಟಿದ್ದು, ಮಂಗಳೂರು ಶೇಕಡಾ 3.5 ಹಾಗೂ ಮೈಸೂರಿನ ಕೊಡುಗೆ ಶೇಕಡಾ 3ರಷ್ಟಿದೆ. ಮಂಗಳೂರು ನಗರದ ವಾತಾವರಣ ಸುಧಾರಣೆಯಾದರೆ ಅಲ್ಲಿ ಐಟಿ ಉದ್ಯಮ ಬೆಳವಣಿಗೆಗೆ ವಿಫುಲ ಅವಕಾಶವಿದೆ ಎಂದು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ಅವರ ಪ್ರತ್ಯೇಕ ಪ್ರಶ್ನೆಗೆ ಉತ್ತರಿಸಿದ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯದಲ್ಲಿ ಖಾಸಗಿ ಕ್ಷೇತ್ರದ 32 ಡೇಟಾ ಸೆಂಟರ್ ಗಳಿದ್ದು, ಮಂಗಳೂರಿನಲ್ಲಿ ಡೇಟಾ ಸೆಂಟರ್ ಆರಂಭಿಸಲು ರಾಜ್ಯ ಸರ್ಕಾರ ಉತ್ತೇಜನ ನೀಡಲಿದೆ ಎಂದು ಹೇಳಿದ್ದಾರೆ. ಸ್ಟಾರ್ಟ್ಅಪ್, ವಿದೇಶಿ ನೇರ ಬಂಡವಾಳ ಹೂಡಿಕೆ ಹಾಗೂ ಎಮರ್ಜಿಂಗ್ ಟೆಕ್ನಾಲಜೀಸ್‌ನಲ್ಲಿ ಬೆಂಗಳೂರು ನಂಬರ್ ಒನ್ ಸ್ಥಾನದಲ್ಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !