ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಡ್ರೈಫ್ರೂಟ್ಸ್ ಅಂಗಡಿಗಳು ಮತ್ತು ಮಾಲೀಕರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.
ಬೆಂಗಳೂರಿನ ರಾಜಾಜಿನಗರ, ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿನ ಡ್ರೈಫ್ರೂಟ್ಸ್ ಅಂಗಡಿಗಳು ಮತ್ತು ಮಾಲೀಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ತೆರಿಗೆ ವಂಚನೆ ಹಿನ್ನೆಲೆಯಲ್ಲಿ ನಡೆಸಲಾದ ದಾಳಿ ಇದಾಗಿದೆ ಎಂದು ತಿಳಿದುಬಂದಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.