ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಅನೇಕ ಬಿಲ್ಡರ್ ಗಳು, ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ವೈಯಾಲಿಕಾವಲ್ , ಕತ್ರಿಗುಪ್ಪೆ ಮತ್ತಿತರ ಕಡೆಗಳಲ್ಲಿರುವ ಬಿಲ್ಡರ್ ಗಳು ಹಾಗೂ ಉದ್ಯಮಿಗಳಿಗೆ ಸೇರಿದ ಆಸ್ತಿಪಾಸ್ತಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪತ್ರಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.
ಕತ್ರಿಗುಪ್ಪೆಯ ಉದ್ಯಮಿ ಶ್ರೀನಿವಾಸ್ ಎಂಬುವರ ಮನೆ ಮೇಲೆ ದಾಳಿ ಮಾಡಿರುವ ಐಟಿ ಅಧಿಕಾರಿಗಳು ಮಹತ್ವದ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.