ಧಾರವಾಡದಲ್ಲಿ ಐಟಿ ದಾಳಿ: ಒಂದೇ ಫ್ಲ್ಯಾಟ್​ನಲ್ಲಿ ಬರೋಬ್ಬರಿ 18 ಕೋಟಿ ರೂ.ಹಣ ಜಪ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಧಾರವಾಡ ನಗರದಲ್ಲಿ ಬಸವರಾಜ ದತ್ತುನವರ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಸವರಾಜು ದತ್ತುನವರ ಒಂದು ಫ್ಲ್ಯಾಟ್‌ನಲ್ಲಿ ಬರೋಬ್ಬರಿ 18 ಕೋಟಿ ರೂ. ಹಣ ಜಪ್ತಿ ಮಾಡಿಕೊಂಡಿದ್ದಾರೆ.

ಧಾರವಾಡದ ದಾಸನಕೊಪ್ಪ ಸರ್ಕಲ್ ಬಳಿ ಇರುವ ಅರ್ಣ ರೇಸಿಡೆನ್ಸಿಯ ಬದವರಾಜ ದತ್ತುನವರ ಮನೆಯ ಮೇಲೆ ಸಂಜೆ 6 ಗಂಟೆ ವೇಳೆಗೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಸವರಾಜ ದತ್ತುನವರ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಈ ಹಣವನ್ನು ಯಾವ ಉದ್ದೇಶಕ್ಕೆ ಸಂಗ್ರಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಜೊತೆಗೆ, ಯಾವ ಮೂಲದಿಂದ ಹಣ ಬಂದಿದೆ, ಯಾವ ಉದ್ದೇಶಕ್ಕೆ ಸಂಗ್ರಹ ಮಾಡಲಾಗಿದೆ ಎಂಬ ಮಾಹಿತಿಯನ್ನು ಐಟಿ ಇಲಾಖೆ ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ.

ಇನ್ನು ಲೋಕಸಭಾ ಚುನಾವಣೆಯ ಅವಧಿಯಲ್ಲಿಯೇ ಇಷ್ಟೊಂದು ದೊಡ್ಡ ಮೊತ್ತದ ಹಣವನ್ನು ಯಾಕೆ ಸಂಗ್ರಹ ಮಾಡಿದ್ದಾರೆ. ಚುನಾವಣೆ ವೇಳೆ ಜನರಿಗೆ ಹಂಚಲು ಕಪ್ಪು ಹಣವನ್ನು ಸಂಗ್ರಹ ಮಾಡಲಾಗಿತ್ತೇ ಎಂಬ ಅನುಮಾನಗಳು ಕೂಡ ವ್ಯಕ್ತವಾಗಿವೆ. ಇನ್ನು ಕಪ್ಪು ಹಣ ಸಂಗ್ರಹದ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ಮಾಡಿದ್ದು, 2 ಗಂಟೆಗಳಿಂದ 20 ಜನ ಅಧಿಕಾರಿಗಳು ಫ್ಲ್ಯಾಟ್‌ನಲ್ಲಿ ಹಣ ಮತ್ತು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!