ಮಾಜಿ ಕಾರ್ಪೊರೇಟರ್ ಸಂಬಂಧಿ ಮನೆಯಲ್ಲಿ ಐಟಿ ದಾಳಿ: ಪ್ರದೀಪ್​ನನ್ನು ವಶಕ್ಕೆ ಪಡೆದ ಅಧಿಕಾರಿಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಬೆಂಗಳೂರಿನ ಆರ್​ಟಿ ನಗರದ ಎರಡು ಸ್ಥಳಗಳ ಮೇಲೆ ಇಂದು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು,ಈ ವೇಳೆ ಆತ್ಮಾನಂದ ಕಾಲೋನಿಯ ಫ್ಲಾಟ್ ಒಂದರ ಕೊಠಡಿಯ ಮಂಚದಡಿ ಬಚ್ಚಿಟ್ಟಿದ್ದ ಕೋಟ್ಯಂತರ ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆಯಾಗಿತ್ತು.

ಬೆಂಗಳೂರಿನ ಆರ್​​. ಟಿ.ನಗರದ ಮಾಜಿ ಕಾರ್ಪೊರೇಟರ್ (Former Corporator)​​​​ ​​​ಅಶ್ವತ್ಥಮ್ಮ, ಪತಿ ಗುತ್ತಿಗೆದಾರ ಆರ್​ಅಂಬಿಕಾಪತಿ ಮತ್ತು ​ಅಂಬಿಕಾಪತಿ ಸೋದರ ಪ್ರದೀಪ್​​ ಫ್ಯ್ಲಾಟ್​​​​​​ ಮೇಲೆ ದಾಳಿ ಮಾಡಿದ್ದರು. ಪರಿಶೀಲನೆ ವೇಳೆ ಬೆಡ್​​ ರೂಮ್​ನ ಮಂಚದ ಕೆಳಗೆ 23 ಬಾಕ್ಸ್​​ನಲ್ಲಿ 500 ರೂ. ಮುಖಬೆಲೆಯ 40 ಕೋಟಿ ರೂ.ಗೂ ಅಧಿಕ ಹಣ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರದೀಪ್​ನನ್ನು ವಶಕ್ಕೆ ಪಡೆಯಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗುತ್ತಿಗೆದಾರ ಅಂಬಿಕಾಪತಿ ಸೋದರ ಪ್ರದೀಪ್​ನನ್ನು ಐಟಿ ಅಧಿಕಾರಿಗಳ ತಂಡ ವಶಕ್ಕೆ ಪಡೆದು ಸನ್ನಿಧಿ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲ್ಯಾಟ್‌ನಿಂದ ಬೆಂಗಳೂರಿನ ಐಟಿ ಕಚೇರಿಗೆ ಕರೆದೊಯ್ದಿದ್ದಾರೆ.

ಈ ಘಟನೆಗೆ ಸಂಬಂಧಪಟ್ಟಂತೆ ಗುತ್ತಿಗೆದಾರ ಅಂಬಿಕಾಪತಿ ಮನೆ, ಆರ್​​ಟಿ ನಗರದ ವೈಟ್​ ಗೌಸ್​ನಲ್ಲಿರುವ ಅಂಬಿಕಾಪತಿ ಮಗಳ ಮನೆ ಮೇಲೂ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಒಂದು ಮನೆ ಮತ್ತು ಆರ್​ಟಿ ನಗರದ ಸುಲ್ತಾನ್ ಪಾಳ್ಯದಲ್ಲಿ ಎರಡು ಕಡೆ ದಾಳಿ ಮಾಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!