ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿರುವ ಬಿಲ್ಡರ್​​ಗಳ ಮನೆಗಳ ಮೇಲೆ IT ರೇಡ್: 20ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿರುವ ಬಿಲ್ಡರ್ ಗಳಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಐಟಿ ಅಧಿಕಾರಿಗಳು ಅನೇಕ ಬಿಲ್ಡರ್ ಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಕೆಆರ್ ಪುರಂ, ಕೊಡಿಗೇಹಳ್ಳಿ ಸೇರಿದಂತೆ 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲಕ್ಕೆ ಐಟಿ ತಂಡ ಶೋಧ ನಡೆಸಿ ದಾಖಲೆಗಳನ್ನು ಪರಿಶೀಲಿಸಿದೆ.

ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ಅಧಿಕಾರಿಗಳು ಬಿಲ್ಡರ್‌ಗಳ ಮನೆ ಮತ್ತು ಕಚೇರಿಗಳಲ್ಲಿ ಶೋಧ ನಡೆಸಿದ್ದಾರೆ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!