ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿ ಭಾಗದಲ್ಲಿ ಇಂದು ಬೆಳ್ಳಂಬೆಳಗ್ಗೆ ಚಿನ್ನದ ಮಳಿಗೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಮೂಲಕ ಚಿನ್ನದ ವ್ಯಾಪಾರಿಗಳಿಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಉಡುಪಿ, ಕಾರ್ಕಳ, ಕುಂದಾಪುರ, ಪಡುಬಿದ್ರಿ, ಬ್ರಹ್ಮಾವರ, ಪುತ್ತೂರು ಸೇರಿದಂತೆ ಹಲವೆಡೆ ಐಟಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
ಕರಾವಳಿ ಭಾಗದಲ್ಲಿ ಏಕಕಾಲದಲ್ಲಿ ಪ್ರಸಿದ್ಧ ಚಿನ್ನದ ಮಳಿಗೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.