ಹೊಸದಿಗಂತ ಡಿಜಿಟಲ್ ಡೆಸ್ಕ್ :
ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ರಾಜಕೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ನಡುವೆ ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ದಾಳಿ ನಡೆಸಿ, ಬಿಗ್ ಶಾಕ್ ನೀಡಿದೆ.
ಬೆಂಗಳೂರಿನಲ್ಲಿ ಕೆಜಿಎಫ್ ಬಾಬು ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹೈಗ್ರೌಂಡ್ಸ್ ಬಳಿಯಿರುವ ರುಕ್ಸಾನಾ ಪ್ಯಾಲೇಸ್ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮಾಡಿದ್ದಾರೆ. ಬೆಂಗಳೂರಿನ 50 ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ.
ಮಂಗಳೂರು, ಮೈಸೂರಿನಲ್ಲಿರುವ ಕಾಂಗ್ರೆಸ್ ಮುಖಂಡರ ಮನೆಗಳ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.