ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, ವಿವಿಧೆಡೆ ಉದ್ಯಮಿಗಳ ಮನೆ, ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ತೆರಿಗೆ ವಂಚನೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಮಾಗಡಿ ರಸ್ತೆ, ಆಡುಗೋಡಿ ಸೇರಿದಂತೆ ಹಲವೆಡೆ ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಇಂದು ಬೆಳಗ್ಗೆ 7 ಗಂಟೆಗೆ ಎರಡು ಇನೋವಾ ಕಾರುಗಳಲ್ಲಿ ಬಂದಿರುವ ಆರು ಅಧಿಕಾರಿಗಳ ತಂಡವು ಮೊದಲು ಮಾಗಡಿ ರಸ್ತೆಯಲ್ಲಿರುವ ಉದ್ಯಮಿ ಪುನೀತ್ ಬೊರಾ ಎನ್ನುವವರ ETA ಗಾರ್ಡನ್ ಅಪಾರ್ಟ್ಮೆಂಟ್‌ನಲ್ಲಿರುವ ಫ್ಲ್ಯಾಟ್ ಮೇಲೆ ದಾಳಿ ಮಾಡಿದ್ದು, ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ.