ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯ ಖ್ಯಾತ ಉದ್ಯಮಿಗಳಾದ ವಿನೋದ್ ದೊಡ್ಡಣ್ಣವರ್, ಪುರುಷೋತ್ತಮ ದೊಡ್ಡಣ್ಣವರ್ ಒಡೆತನದ ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ದೊಡ್ಡಣ್ಣವರ್ ಬ್ರದರ್ಸ್ ಗಣಿ, ಸಕ್ಕರೆ ಕಾರ್ಖಾನೆ ಮಾಲೀಕರಾಗಿದ್ದಾರೆ. ಗೋವಾದಿಂದ ಆಗಮಿಸಿರುವ ಐಟಿ ಅಧಿಕಾರಿಗಳು ಒಟ್ಟು 5 ತಂಡಗಳಾಗಿ ಸೋಮವಾರ ಮಧ್ಯರಾತ್ರಿ ಮೂರು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಐಟಿ ಅಧಿಕಾರಿಗಳು ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಕಚೇರಿಗೆ ದೊಡ್ಡಣ್ಣವರ್ ಕುಟುಂಬಸ್ಥರನ್ನು ಕರೆಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.