ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಜನರು ಸಾವು-ನೋವಿಗೆ ಹೋಗಲು ಇಂದು ಬಸ್ಸಿಲ್ಲ. ಮತ್ತೊಂದು ಕಡೆಯಲ್ಲಿ ಸರ್ಕಾರಿ ನೌಕರರ ಹಿಂಬಾಕಿ ಕೊಡಲು ಸರ್ಕಾರದ ಬಳಿ ದುಡ್ಡಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಇದರ ಪರಿಣಾಮವಾಗಿ ರಾಜ್ಯಾದ್ಯಂತ ಬಸ್ ಸಂಚಾರ ಭಾಗಶಃ ಸ್ಥಗಿತಗೊಂಡಿದೆ. ಬಂದ್ ನಡೆಸದಂತೆ ಹೈಕೋರ್ಟ್ ಆದೇಶದ ಕೊಟ್ಟರೂ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
ನೌಕರರು, ಉದ್ಯೋಗಿಗಳು ಕೆಲಸಕ್ಕೆ ಹೋಗಲು ಬಸ್ಸಿಲ್ಲ. ನೆಂಟರಿಷ್ಟರ ಮನೆಗಳಿಗೆ, ಶುಭ ಸಮಾರಂಭಗಳಿಗೆ, ಸಾವು-ನೋವಿಗೆ ಹೋಗಲು ಬಸ್ಸಿಲ್ಲ. ಇದು ಬಹುಪಾಲು ಕನ್ನಡಿಗರ ಇವತ್ತಿನ ಬವಣೆ ಎಂದು ವಿವರಿಸಿದ್ದಾರೆ.
ರಾಜ್ಯದ ಖಜಾನೆ ಖಾಲಿ ಮಾಡಿ ಪಾಪರ್ ಆಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಚೆಲ್ಲಾಟ, ಜನಸಾಮಾನ್ಯರಿಗೆ ಪರದಾಟ, ಗೋಳಾಟ, ತೊಳಲಾಟ! ಸಿಎಂ ಸಿದ್ದರಾಮಯ್ಯ ನವರೇ, ನಿಮ್ಮ ಘನಂದಾರಿ ಆಡಳಿತದಿಂದ ಸಾರಿಗೆ ನಿಗಮಗಳನ್ನು ಸರ್ವನಾಶ ಮಾಡಿಬಿಟ್ಟರಲ್ಲ ಸ್ವಾಮಿ ಎಂದು ಕಿಡಿಕಾರಿದ್ದಾರೆ.