June 17, 2026
Wednesday, June 17, 2026
spot_img

ಸರ್ಕಾರಿ ಇಲಾಖೆಗಳಿಂದ ಕಿರಿಕಿರಿ ಆಗ್ತಿದೆಯಂತೆ! ನಾಳೆಯಿಂದ ಬೀದಿ ಬದಿ ವ್ಯಾಪಾರಿಗಳ ಅನಿರ್ದಿಷ್ಟಾವಧಿ ಮುಷ್ಕರ ಶುರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳಿಂದ ಆಗುತ್ತಿರುವ ಕಿರುಕುಳವನ್ನು ಖಂಡಿಸಿ ಬೀದಿ ಬದಿ ವ್ಯಾಪಾರಿಗಳು ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಿದ್ದಾರೆ.

ಅಧಿಕಾರಿಗಳ ಕಿರುಕುಳ ತಡೆಯೋಕೆ ಆಗುತ್ತಿಲ್ಲ ನಮಗೆ ರಕ್ಷಣೆ ಕೊಡಿ ಎಂದು ಬೆಂಗಳೂರಿನ ಸುಮಾರು 58,000ಕ್ಕೂ ಹೆಚ್ಚು ಬೇಕರಿ, ಬೀಡಾ ಅಂಗಡಿ ಮಾಲೀಕರು ಹಾಗೂ ಬೀದಿ ಬದಿ ವ್ಯಾಪಾರಿಗಳು ಜೂನ್ 18ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ರಾಜ್ಯ ಅಧ್ಯಕ್ಷರಾದ ರವಿಶೆಟ್ಟಿ ಬೈಂದೂರು ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಣ್ಣ ವ್ಯಾಪಾರಿಗಳು ಕಾನೂನುಬದ್ಧವಾಗಿ ವ್ಯಾಪಾರ ಮಾಡುತ್ತಾ, ತೆರಿಗೆ ಪಾವತಿಸುತ್ತಿದ್ದರೂ ಸಹ ಅಧಿಕಾರಿಗಳಿಂದ ನಿರಂತರ ತಪಾಸಣೆ, ದಂಡ ಮತ್ತು ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ ಎಂದು ಆಪಾದಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಎಲ್ಲ ಬೇಕರಿಗಳು ಹಾಗೂ ಸಣ್ಣ ಅಂಗಡಿಗಳು ಬಂದ್‌ಗೆ ಬೆಂಬಲ ನೀಡಿವೆ. ಇನ್ನು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದರೂ, ರಾಜ್ಯದ ಎಲ್ಲ ಅಂಗಡಿಗಳೂ ಸಹಕರಿಸಲಿವೆಯಾ? ಕಾದುನೋಡಬೇಕಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !