ಹೊಸದಿಗಂತ ಡಿಜಿಟಲ್ ಡೆಸ್ಕ್:
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಡಿಸಿಎಂ ಡಿಕೆಶಿಗೆ ದೊಡ್ಡ ಆಘಾತ ಎದುರಾಗಿದ್ದು, ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆಯನ್ನು ನ.26ಕ್ಕೆ ಮುಂದೂಡಿದೆ.
2017ರ ಆಗಸ್ಟ್ 2ರಂದು ದೆಹಲಿ ಸೇರಿದಂತೆ ವಿವಿಧೆಡೆ ಡಿಕೆಶಿ ಆಸ್ತಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಈ ವೇಳೆ ಆದಾಯ ತೆರಿಗೆ ಅಧಿಕಾರಿಗಳು ಹಣ ಪತ್ತೆ ಹಚ್ಚಿ ಮೊಕದ್ದಮೆ ದಾಖಲಿಸಿದ್ದರು. ಜಾರಿ ನಿರ್ದೇಶನಾಲಯ ಡಿಕಿಶಿ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿತ್ತು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಡಿಕೆಶಿ ವಿರುದ್ಧ ತನಿಖೆ ನಡೆಸಲು ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದಿತ್ತು. ಈ ಪ್ರಕರಣದಲ್ಲಿ ಡಿಸಿಎಂ ಡಿಕೆಶಿಗೆ ಬಿಗ್ ಶಾಕ್ ಎದುರಾಗಿದ್ದು, ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.