ಮಾಜಿ ಸಚಿವ ಹೆಚ್.ಆಂಜನೇಯನ ಆಪ್ತರಿಗೆ ಐಟಿ ಶಾಕ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಸಚಿವ , ಕಾಂಗ್ರೆಸ್ ಮುಖಂಡ ಹೆಚ್.ಆಂಜನೇಯನ ಆಪ್ತರಾದ ಸುರೇಶ್, ಸಹೋದರ ತಿಪ್ಪೇಸ್ವಾಮಿ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಪಾಡಿಗಟ್ಟೆ ಗ್ರಾಮದ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪಾಡಿಗಟ್ಟೆ ಸುರೇಶ್​​, ಗುತ್ತಿಗೆದಾರ ತಿಪ್ಪೇಸ್ವಾಮಿ ಆದಾಯ ಮೀರಿ ಆಸ್ತಿಗಳಿಸಿದ್ದಾರೆಂದು ಐಟಿ ಅಧಿಕಾರಿಗಳಿಗೆ ಮಾಹಿತಿ ದೊರೆತಿತ್ತು. ಈ ಹಿನ್ನೆಲೆ ಹುಬ್ಬಳ್ಳಿಯಿಂದ ಆಗಮಿಸಿದ ಐಟಿ ಅಧಿಕಾರಿಗಳು ಪಾಡಿಗಟ್ಟೆ ಗ್ರಾಮದ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ಸದ್ಯ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!