IT RAID |‘ಗೇಮ್ ಚೇಂಜರ್’, ‘ಪುಷ್ಪ 2’ ನಿರ್ಮಾಪಕರಿಗೆ ಐಟಿ ಶಾಕ್; 65 ತಂಡಗಳಿಂದ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ತೆರಿಗೆ ಇಲಾಖೆ ತಂಡದವರು ದಿಲ್ ರಾಜು ಮನೆ, ಕಚೇರಿ ಹಾಗೂ ಅವರ ಕುಟುಂಬದ ಮೇಲೆ ದಾಳಿ ನಡೆಸಿದೆ. ಈ ದಾಳಿ ವೇಳೆ ಕೆಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗುತ್ತಿದೆ. ಇದಲ್ಲದೆ, ‘ಪುಷ್ಪ 2’ ನಿರ್ಮಾಪಕರ ಮನೆಯ ಮೇಲೂ ದಾಳಿ ಆಗಿದೆ.

ಐಟಿ ಇಲಾಖೆಯವರು ಬರೋಬ್ಬರಿ 65 ತಂಡಗಳಲ್ಲಿ ಬಂದಿದ್ದು, ದಿಲ್ ರಾಜುಗೆ ಸಂಬಂಧಿಸಿದ ಎಂಟು ಕಡೆಗಳಲ್ಲಿ ಏಕ ಕಾಲಕ್ಕೆ ದಾಳಿ ನಡೆಸಿದ್ದಾರೆ. ಇದರಲ್ಲಿ ದಿಲ್ ರಾಜು ಅವರ ಮನೆ, ಕಚೇರಿ, ಅವರ ಸಹೋದರ ಸಿರೇಶ್ ಮಗಳು ಹನ್ಸಿತಾ ರೆಡ್ಡಿ ಮನೆಗಳು ಕೂಡ ಇವೆ. ‘ಸಂಕ್ರಾಂತಿಗೆ ವಸ್ತುನ್ನಾಮ್’​ ಚಿತ್ರದ ನಿರ್ದೇಶಕ ಅನಿಲ್ ರಾವಿಪುಡಿ ಕಚೇರಿ ಮೇಲೂ ಐಟಿ ಇಲಾಖೆ ಪರಿಶೀಲನೆ ನಡೆಸಿದೆ. ಈ ದಾಳಿ ಹಿಂದಿನ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಎರಡೂ ಸಂಸ್ಥೆಗಳು ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡುವುದರಲ್ಲಿ ಎತ್ತಿದ ಕೈ. ಈ ಸಂದರ್ಭದಲ್ಲಿ ಎಲ್ಲಾದರೂ ಅಕ್ರಮ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಸಂಕ್ರಾಂತಿ ವೇಳೆ ದಿಲ್ ರಾಜು ನಿರ್ಮಾಣದ ‘ಗೇಮ್ ಚೇಂಜರ್’ ಹಾಗೂ ‘ಸಂಕ್ರಾಂತಿಕಿ ವಸ್ತುನ್ನಾಮ್’ ಚಿತ್ರಗಳು ರಿಲೀಸ್ ಆಗಿವೆ. ‘ಗೇಮ್ ಚೇಂಜರ್’ ಸೋಲನ್ನು ಉಣಿಸಿದರೆ, ‘ಸಂಕ್ರಾಂತಿಕಿ ವಸ್ತುನಾಮ್’ ಚಿತ್ರ ಸೂಪರ್ ಡೂಪರ್ ಹಿಟ್ ಎನಿಸಿಕೊಂಡಿದೆ.

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!