ನಟ ದರ್ಶನ್‌ಗೆ ಐಟಿ ಸಂಕಷ್ಟ: ಸತತ 7 ಗಂಟೆಗಳ ಕಾಲ ವಿಚಾರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ದರ್ಶನ್‌ಗೆ ಐಟಿ ಸಂಕಷ್ಟ ಎದುರಾಗಿದ್ದು,ದರ್ಶನ್ ನನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆ.

ಲೆಕ್ಕ ಪರಿಶೋಧಕರು, ಜೈಲು ಅಧೀಕ್ಷಕಿ ಲತಾ ಸಮ್ಮುಖದಲ್ಲಿ ದರ್ಶನ್ ವಿಚಾರಣೆ ನಡೆಸಿದ್ದು, ಇದೀಗ ವಿಚಾರಣೆ ಅಂತ್ಯವಾಗಿದೆ.

ಸತತ 7 ಗಂಟೆಗಳ ಕಾಲ ನಟ ದರ್ಶನ್ ಐಟಿ ಅಧಿಕಾರಿಗಳ ವಿಚಾರಣೆಯನ್ನು ಎದುರಿಸಿದ್ದಾರೆ. ಈ ವೇಳೆ ಐಟಿ ಅಧಿಕಾರಿಗಳು ನಟ ದರ್ಶನ್ ಅವರಿಗೆ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲಕ್ಷಾಂತರ ರೂಪಾಯಿ ಡೀಲ್ ಮಾಡಿಕೊಂಡಿರುವ ಕುರಿತು ಪ್ರಶ್ನೆ ಕೇಳಿದ್ದಾರೆ. ಇದೀಗ ಐಟಿ ಅಧಿಕಾರಿಗಳ ವಿಚಾರಣೆ ಅಂತ್ಯವಾಗಿದ್ದು, ಬಳ್ಳಾರಿ ಜೈಲಿನಿಂದ ಎರಡು ಕಾರಿನಲ್ಲಿ ಐವರು ಅಧಿಕಾರಿಗಳು ತೆರಳಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!