ಹೊಸದಿಗಂತ ಡಿಜಿಟಲ್ ಡೆಸ್ಕ್
ಥೈಲೆಂಡ್ನಲ್ಲಿ ಸಣ್ಣ ಪ್ರಯಾಣಿಕ ವಿಮಾನವೊಂದು ಪತನಗೊಂಡಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ರಾಜಧಾನಿ ಬ್ಯಾಂಕಾಂಕ್ನಲ್ಲಿ ಟೇಕಾಫ್ ಆದ ಕೆಲವೇ ಸಮಯದಲ್ಲಿ ಪತನಗೊಂಡಿದೆ.
ಸ್ಥಳೀಯ ಥಾಯ್ ಮಾಧ್ಯಮ ವರದಿಗಳ ಪ್ರಕಾರ, ವಿಮಾನ ನಿಲ್ದಾಣದಿಂದ ಸುಮಾರು 40 ಕಿಮೀ ದೂರದಲ್ಲಿರುವ ಮ್ಯಾಂಗ್ರೋವ್ ಜೌಗು ಪ್ರದೇಶದಲ್ಲಿ ವಿಮಾನದ ಅವಶೇಷಗಳು ಪತ್ತೆಯಾಗಿವೆ.
ವಿಮಾನವು ಏಳು ಪ್ರಯಾಣಿಕರು ಮತ್ತು ಇಬ್ಬರು ಪೈಲಟ್‌ಗಳನ್ನು ಹೊತ್ತೊಯ್ಯುತ್ತಿತ್ತು, ವಿಮಾನದಲ್ಲಿ ಐದು ಹ್ಯಾಂಕಾಂಗ್ ನಿವಾಸಿಗಳು, ಚೀನೀ ಪ್ರವಾಸಿಗರು ಮತ್ತು ಸಿಬ್ಬಂದಿ ಇದ್ದರು.
ಥಾಯ್ ಫ್ಲೈಯಿಂಗ್ ಸರ್ವೀಸ್ ಕಂಪನಿಯಿಂದ ನಿರ್ವಹಿಸಲ್ಪಡುವ ಸೆಸ್ನಾ ಕಾರವಾನ್ ಗುರುವಾರ ಮಧ್ಯಾಹ್ನ 2.46ಕ್ಕೆ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿತ್ತು ಎಂದು ಥೈಲ್ಯಾಂಡ್ ನಾಗರಿಕ ವಿಮಾನಯಾನ ಪ್ರಾಧಿಕಾರ ತಿಳಿಸಿದೆ.