ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರ್ ಲಾರಿಗೆ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಐದು ಮಂದಿ ಮೃತಪಟ್ಟಿದ್ದಾರೆ.
ಆಂಧ್ರದ ಚಿತ್ತೂರು ಬಳಿ ಕಾರು ಅಪಘಾತಕ್ಕೆ ಈಡಾಗಿದೆ. ಪಲಮನೇರು ಬಳಿ ಹಿಂಬದಿಯಿಂದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಅತಿ ವೇಗದಲ್ಲಿ ಕಾರು ಚಲಾಯಿಸುತ್ತಿದ್ದು, ಗುದ್ದಿಗ ಸ್ಪೀಡ್‌ಗೆ ಕಾರ್ ಅಪ್ಪಚ್ಚಿಯಾಗಿದೆ.
ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರಕ್ಕೆ ತೆಗೆಯುವುದು ತುಂಬಾ ಕಷ್ಟಕರವಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತರು ಕರ್ನಾಟಕ ಮೂಲದವರು, ಬೆಂಗಳೂರಿನಿಂದ ಕಾರು ಹೊರಟಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಮೃತರ ಗುರುತುಗಳು ಮಾತ್ರ ಇನ್ನೂ ಪತ್ತೆಯಾಗಿಲ್ಲ.
ಮಾಹಿತಿ ತಿಳಿದ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಅಪಘಾತಕ್ಕೆ ಏನು ಕಾರಣ ಎಂದು ಹುಡುಕುತ್ತಿದ್ದಾರೆ. ಚಾಲಕ ನಿದ್ದೆ ಮಂಪರಿನಲ್ಲಿದ್ದನೋ ಅಥವಾ ಕಾರು ನಿಯಂತ್ರಣಕ್ಕೆ ಸಿಕ್ಕಿಲ್ಲವೋ ಎನ್ನುವ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ.
ಮೃತರ ಕುಟುಂಬಕ್ಕೆ ಮಾಹಿತಿ ತಿಳಿಸಿ, ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.



