ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ಜನರ ನಿದ್ದೆಗೆಡಿಸಿದ್ದು, ಚಿರತೆ ಅಲ್ಲ, ಕಾಡುಬೆಕ್ಕು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿದ್ದು, ವಿದ್ಯಾರ್ಥಿಗಳು ಹೆದರಿದ್ದರು. ಆದರೆ ಇದು ಚಿರತೆಯೇ ಅಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ವನ್ಯಜೀವಿ ಸಂರಕ್ಷಣೆ ಕಾರ್ಯಕತರು ಮಾಹಿತಿ ನೀಡಿದ್ದಾರೆ.
ದಕ್ಷಿಣ ಏಷ್ಯಾದ ಕಾಡುಗಳಲ್ಲಿ ಸಾಮಾನ್ಯವಾಗಿ ಕಾಡುಬೆಕ್ಕುಗಳು ಕಂಡುಬರುತ್ತವೆ. ಚಿರತೆ ಎಂದು ಹೇಳಲಾದ ಕಾಡುಬೆಕ್ಕಿನ ಸಿಸಿಟಿವಿ ಫೂಟೇಜ್ ಎಲ್ಲೆಡೆ ವೈರಲ್ ಆಗಿದ್ದು, ಕ್ಯಾಂಪಸ್ ನಿವಾಸಿಗಳು ಆತಂಕಕ್ಕೀಡಾಗಿದ್ದರು. ಆದರೆ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ತಜ್ಞರು ಹೇಳಿದ್ದಾರೆ.