ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಎಲ್ಲ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಮಧ್ಯಮವರ್ಗದ ಜನ ಹೈರಾಣಾಗಿದ್ದು, ಈ ಲಿಸ್ಟ್ನಲ್ಲಿ ನಂದಿನಿ ಹಾಲು ಕೂಡ ಸೇರಿದೆ.
ಬೆಳಗ್ಗೆ ಕೆಎಂಎಫ್ ನಂದಿನಿ ಹಾಲಿನ ದರವನ್ನು ಎರಡು ರೂಪಾಯಿ ಹತ್ತು ಪೈಸೆ ಹೆಚ್ಚಳ ಮಾಡಲಾಗಿದ್ದು, ನಾಳೆಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.
ಈ ಸಂಬಂಧ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಹಾಲಿನ ದರ ಏರಿಕೆ ಮಾಡುವುದು ಸರ್ಕಾರ ಅಲ್ಲ, ಕೆಎಂಎಫ್. ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆ ಇದೆ. ಹಾಲಿನ ದರ ಹೆಚ್ಚಳ ಬಗ್ಗೆ ಚರ್ಚೆ ಮಾಡ್ತೀನಿ ಎಂದಿದ್ದಾರೆ.
ಬೇರೆ ರಾಜ್ಯಗಳ ಪರಿಸ್ಥಿತಿ ನೋಡಿಕೊಂಡು ದರ ಹೆಚ್ಚಳ ಮಾಡ್ತಾರೆ. ಅಲ್ಲಿಗಿಂತ ಹಾಲಿನ ದರ ಕಡಿಮೆ ಇದ್ದರೆ ಜಾಸ್ತಿ ಮಾಡ್ತಾರೆ. ನನಗೆ ಗೊತ್ತಿರುವ ಪ್ರಕಾರ ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ಇಲ್ಲಿ ಕಡಿಮೆ ಇದೆ ಎಂದು ತಿಳಿಸಿದರು.