ಹೊಸದಿಗಂತ ವರದಿ,ಮೈಸೂರು:
ಗ್ರಾಮಸ್ಥರಿಗೆ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದು ಸೆರೆಯಾದ ಘಟನೆ ಜಿಲ್ಲೆಯ
ಟಿ.ನರಸೀಪುರ ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿತ್ತು. ಇದರಿಂದ ಭಯಾತಂಕಗೊoಡಿದ್ದ ಗ್ರಾಮಸ್ಥರು ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸಿದ್ದರು. ಈ ಹಿನ್ನಲೆಯಲ್ಲಿ ಗ್ರಾಮದ ಜಮೀನೊಂದರಲ್ಲಿ ಬೋನು ಇಡಲಾಗಿತ್ತು. ಭಾನುವಾರ ಎರಡೂವರೆ ವರ್ಷದ ಹೆಣ್ಣು ಚಿರತೆ ಬಿದ್ದಿದೆ. ಸೆರೆ ಸಿಕ್ಕ ಚಿರತೆಯ ವೈದ್ಯಕೀಯ ಪರೀಕ್ಷೆ ನಡೆಸಿದ ಅರಣ್ಯಾಧಿಕಾರಿಗಳು, ಬಳಿಕ ಅದಕ್ಕೆ ಮೈಕ್ರೋ ಚಿಪ್ ಅಳವಡಿಸಿ ವನ್ಯಜೀವಿ ಧಾಮದಲ್ಲಿ ಬಿಟ್ಟಿದ್ದಾರೆ.